2026-03-07 04:55:37

Three Congress MLAs join BJP | ಅಸ್ಸಾಂ ಚುನಾವಣೆ ಬಿಜೆಪಿ ಸೇರಿದ ಮೂವರು ಕಾಂಗ್ರೆಸ್‌ ಶಾಸಕರು | Speed News Kannada

Three Congress MLAs join BJP | ಅಸ್ಸಾಂ ಚುನಾವಣೆ ಬಿಜೆಪಿ ಸೇರಿದ ಮೂವರು ಕಾಂಗ್ರೆಸ್‌ ಶಾಸಕರು | Speed News Kannada

ಗುವಾಹಟಿ: ಕೆಲವೇ ತಿಂಗಳಲ್ಲಿ ಅಸ್ಸಾಂ ವಿಧಾನಸಭೆಗೆ ಚುನಾವನೆ ನಡೆಯಲಿದ್ದು, ಮೂವರು ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರುವ ಮೂಲಕ ಕೈ ಪಾಳಯಕ್ಕೆ ಹೊಡೆತ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ನಿಂದ ಬಿಜೆಪಿ ಸೇರುವ ಮುಖಂಡರ ಸಂಖ್ಯೆ ಹೆಚ್ಚುತ್ತಲೇ ಇದೆ.
ಶಾಸಕರಾದ ಕೆ.ಪುರಕಾಯಸ್ಥ, ಶಶಿಕಾಂತ ದಾಸ್ ಮತ್ತು ಬಸಂತ ದಾಸ್ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದಾರೆ.  ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಸೈಕಿಯಾ ಮತ್ತು ಕೇಂದ್ರ ಸಚಿವ ಪಬಿತ್ರ ಮಾರ್ಗರೇಟ್‌ ಅವರು ಈ ಶಾಸಕರನ್ನು ಪಕ್ಷಕ್ಕೆ ಸ್ವಾಗತಿಸಿದರು. 
ಕೆಲವು ದಿನಗಳ ಹಿಂದೆ ಕಾಂಗ್ರೆಸ್‌ ಮುಖಂಡ ಭೂಪೇನ್‌ ಬೋರಾ ಸೇರಿದಂತೆ ಹಲವರು ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಈ ಮೂವರು ಶಾಸಕರು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆಪ್ತರು ಎನ್ನಲಾಗಿದೆ. ಈ ಹಿಂದೆ ಇವರು ಬಿಜೆಪಿ ನೀತಿಗಳಿಗೆ ಬೆಂಬಲ ಸೂಚಿಸಿದ್ದರು. 126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಗೆ ಏಪ್ರಿಲ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ  ಮಾತನಾಡಿ, ಕಳೆದ ಎರಡು ವರ್ಷಗಳಿಂದ ಈ ಮೂವರು ಶಾಸಕರು ವಿಧಾನಸಭೆಯಲ್ಲಿ ತಮ್ಮ ಸರ್ಕಾರವನ್ನು ಬೆಂಬಲಿಸುತ್ತಿದ್ದರು. ಇಂದು ಅವರು ಅಧಿಕೃತವಾಗಿ ಪಕ್ಷಕ್ಕೆ ಸೇರಿದ್ದಾರೆ. ಅವರನ್ನು ಬಿಜೆಪಿಗೆ ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡಲಾಗುತ್ತದೆಯೇ ಎಂಬ ಪ್ರಶ್ನೆಗೆ, ಈ ವಿಷಯವನ್ನು ಇನ್ನೂ ಚರ್ಚಿಸಲಾಗಿಲ್ಲ, ಆದರೆ ಪಕ್ಷದ ರಾಜ್ಯ ಚುನಾವಣಾ ಸಮಿತಿ ನೋಡಿಕೊಳ್ಳುತ್ತದೆ ಎಂದು ಉತ್ತರಿಸಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.