2026-03-07 02:59:33

Three Laborers Died | ಕೋಲಾರ ಬೊಲೆರೊ ವಾಹನ ಪಲ್ಟಿ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವು | Speed News Kannada

Three Laborers Died  | ಕೋಲಾರ ಬೊಲೆರೊ ವಾಹನ ಪಲ್ಟಿ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವು | Speed News Kannada

ಕೋಲಾರ: ಬೊಲೆರೊ ಪಲ್ಟಿಯಾಗಿ ಮೂವರು ಕಾರ್ಮಿಕರು ಅಸು ನೀಗಿರುವ ದುರಂತ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಲೋನಿ ಗೇಟ್ ಎಂಬಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ಮುನಿಯಮ್ಮ, ವೆಂಕಟಪ್ಪ ಹಾಗೂ ಮತ್ತೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. 
ಇವರು ಹುಣಸೆಹಣ್ಣು ಬಿಡಿಸುವ ಕೆಲಸ ಮುಗಿಸಿಕೊಂಡು ಊರಿಗೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ವಾಹನ ಪಲ್ಟಿಯಾಗಿದ್ದಕ್ಕೆ 10ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಇವರನ್ನು  ಶ್ರೀನಿವಾಸಪುರ ಮತ್ತು ಆಂಧ್ರದ ಮದನಪಲ್ಲಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.