2026-07-23 12:21:45

Three seriously injured as bus falls off bridge into ravine|ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌ ಮೂವರಿಗೆ ಗಂಭೀರ ಗಾಯ|Speed News Kannada

Three seriously injured as bus falls off bridge into ravine|ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌ ಮೂವರಿಗೆ ಗಂಭೀರ ಗಾಯ|Speed News Kannada

ಭದ್ರಾವತಿಯ ಕಾಗೇಹಳ್ಳದ ಬಳಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ. ಇಂದು ಮಧ್ಯಾಹ್ನ ಸುಮಾರು 12:30ಕ್ಕೆ ಸಂಭವಿಸಿದ ಅಪಘಾತದಲ್ಲಿ, ಬಸ್‌ನಲ್ಲಿದ್ದ 35 ಪ್ರಯಾಣಿಕರಲ್ಲ ಮೂವರಿಗೆ ಕೈ, ಕಾಲು ಮುರಿದ ಗಾಯವಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಗಾಯಾಳುಗಳನ್ನು ಭದ್ರಾವತಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಗಂಭೀರ ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ,ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣವಾಗಿದೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.