2026-06-08 04:58:01

ಗಂಗಾ ನದಿಗೆ ಮಾಂಸಾಹಾರದ ತ್ಯಾಜ್ಯ ಎಸೆಯುವುದರಿಂದ ಧಾರ್ಮಿಕ ಭಾವನೆಗೆ ಧಕ್ಕೆ: ಹೈಕೋರ್ಟ್ |Speed News Kannada

ಗಂಗಾ ನದಿಗೆ ಮಾಂಸಾಹಾರದ ತ್ಯಾಜ್ಯ ಎಸೆಯುವುದರಿಂದ ಧಾರ್ಮಿಕ ಭಾವನೆಗೆ ಧಕ್ಕೆ: ಹೈಕೋರ್ಟ್ |Speed News Kannada

 

ಲಖನೌ: ಗಂಗಾನದಿಗೆ ಮಾಂಸಾಹಾರದ ತ್ಯಾಜ್ಯವನ್ನು ಎಸೆಯುವುದರಿಂದ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯಾಲಯದ ಈ ತೀರ್ಪು ಕುತೂಹಲ ಮೂಡಿಸಿದೆ.

ಉತ್ತರಪ್ರದೇಶದ ವಾರಾಣಸಿಯಲ್ಲಿ ದೋಣಿಯೊಂದರಲ್ಲಿ ನಡೆದ ಇಫ್ತಾರ್ ಕೂಟ ನಡೆದಿತ್ತು. ಈ ಸಂದರ್ಭದಲ್ಲಿ ಮಾಂಸಾಹಾರದ ಗೆ ತ್ಯಾಜ್ಯವನ್ನು ನದಿಗೆ ಎಸೆಯಲಾಗಿದೆ ಎಂಬ ಆರೋಪದ ಪ್ರಕರಣ ಇದಾಗಿದೆ.

ಈ ಪ್ರಕರಣದಲ್ಲಿ ಆರೋಪ ಹೊತ್ತಿದ್ದ ಐವರು ಆರೋಪಿಗಳಾದ ಮೊಹಮ್ಮದ್ ಆಜಾದ್ ಅಲಿ, ಮೊಹಮ್ಮದ್ ತಹ್ಸೀಮ್, ನಿಹಾಲ್ ಅಫ್ರಿದಿ, ಮೊಹಮ್ಮದ್ ತೌಸೀಫ್ ಅಹ್ಮದ್ ಮತ್ತು ಮೊಹಮ್ಮದ್ ಅನಾಸ್ ಅವರಿಗೆ ನ್ಯಾಯಮೂರ್ತಿ ರಾಜೀವ್ ಲೋಚನ್ ಶುಕ್ಲಾ ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿಗಳು ತಮ್ಮ ಕೃತ್ಯಕ್ಕೆ ಕ್ಷಮೆಯಾಚಿಸಿದ್ದಾರೆ ಮತ್ತು ಅವರ ಕುಟುಂಬದವರೂ ಸಮಾಜಕ್ಕೆ ಉಂಟಾದ ನೋವು ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಪ್ರಕರಣದ ಸತ್ಯಾಸತ್ಯತೆ ಮತ್ತು ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು, ಆರೋಪಿಗಳಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲದಿರುವುದನ್ನು ಪರಿಗಣನೆಗೆ ತೆಗದುಕೊಳ್ಳಲಾಗಿದೆ. ಈಗಾಗಲೇ ಆರೋಪಿಗಳು ಅನುಭವಿಸಿದ ಬಂಧನದ ಅವಧಿ ಮತ್ತು ಕ್ಷಮೆಯಾಚನೆಯನ್ನು ಪರಿಗಣಿಸಿ, ಜಾಮೀನು ನೀಡಲು ಇದು ಸೂಕ್ತ ಪ್ರಕರಣವಾಗಿದೆ ಎಂದು ಶುಕ್ಲಾ ತಿಳಿಸಿದ್ದಾರೆ.

ಇಫ್ತಾರ್ ಪಾರ್ಟಿಯ ವೇಳೆ ಮುಸ್ಲಿಂ ಸಮುದಾಯದ ಸದಸ್ಯರು ಮಾಂಸಾಹಾರವನ್ನು ಸೇವಿಸಿದ್ದಾರೆ. ನಂತರ ಅದರ ತ್ಯಾಜ್ಯವನ್ನು ಗಂಗಾನದಿಗೆ ಎಸೆದಿದ್ದಾರೆ ಎಂಬ ಆರೋಪವಿದೆ. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಈ ಕೃತ್ಯದಿಂದ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಬಿಜೆಪಿ ಯುವ ಮೋರ್ಚಾದ ವಾರಾಣಸಿ ಘಟಕದ ಅಧ್ಯಕ್ಷ ರಜತ್ ಜೈಸ್ವಾಲ್ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಮಾರ್ಚ್ 16ರಂದು ಎಫ್‌ಐಆರ್ ದಾಖಲಿಸಲಾಗಿತ್ತು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.