2026-06-25 02:03:24

ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡಿದ್ದು ಸಾಕು, ಮನೆಗೆ ಬಾ ಅಂದಿದ್ದಕ್ಕೆ ಯುವಕ ಆತ್ಮಹತ್ಯೆ

ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡಿದ್ದು ಸಾಕು, ಮನೆಗೆ ಬಾ ಅಂದಿದ್ದಕ್ಕೆ ಯುವಕ ಆತ್ಮಹತ್ಯೆ

ಗಣೇಶ ಪ್ರತಿಷ್ಠಾಪನೆ ಜಾಗದಲ್ಲಿ ಹಾಡುಗಳಿಗೆ ಡ್ಯಾನ್ಸ್ ಮಾಡಿಕೊಂಡು ಸಂಭ್ರಮದಲ್ಲಿ ತೇಲಾಡುತ್ತಿದ್ದ ಯುವಕನಿಗೆ ಸಹೋದರ ಹಾಗೂ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ನೊಂದು ಯುವಕ (Youth) ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಚಿಕ್ಕಪ್ಯಾಯಲಗುರ್ಕಿ ಗ್ರಾಮದಲ್ಲಿ ನಡೆದಿದೆ.

ಗಿರೀಶ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಗಣೇಶೋತ್ಸವದಲ್ಲಿ ಹಾಡು ಹಾಕಿ ಡ್ಯಾನ್ಸ್ ಮಾಡುತ್ತಿದ್ದು, ರಾತ್ರಿ 11 ಗಂಟೆಯಾದರೂ ಮನೆಗೆ ಬಂದಿರಲಿಲ್ಲ. ಇದರಿಂದ ಆತನ ಸಹೋದರ ಹಾಗೂ ತಾಯಿ ಬಂದು ಮನೆಗೆ ಬಾ ಎಂದು ಬೈದು ಬುದ್ಧಿವಾದ ಹೇಳಿದ್ದಾರೆ. ಈ ಮಾತುಗಳಿಂದ ನೊಂದ ಗಿರೀಶ್ ಗ್ರಾಮದ ಹೊರವಲಯದ ಮುತ್ತುರಾಯಸ್ವಾಮಿ ದೇವಾಲಯದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.