2026-06-08 01:22:49

Ticket Prices Increase | ಟಿಕೆಟ್ ದರ ಏರಿ! ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್! | Speed News Kannada

Ticket Prices Increase | ಟಿಕೆಟ್ ದರ ಏರಿ! ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್! | Speed News Kannada

ಬೆಂಗಳೂರು (ಫೆ.04): ನಮ್ಮ ಮೆಟ್ರೋ ಬೆಂಗಳೂರಿನ ಜೀವನಾಡಿಯೇ ಆಗಿದೆ. ಟ್ರಾಫಿಕ್ ಜಂಜಾಟದಿಂದ ತಪ್ಪಿಸಿಕೊಳ್ಳಲು ಜನರು ಮೆಟ್ರೋ ಪ್ರಯಾಣ ಮಾಡೋದೆ ಬೆಸ್ಟ್ ಅಂತಾರೆ. ನಮ್ಮ ಮೆಟ್ರೋಗಳಲ್ಲಿ ಪ್ರಯಾಣಿಕರ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗ್ತಾನೆ ಇದರೆ. 
ಜೊತೆಗೆ ಮೆಟ್ರೋ ಟಿಕೆಟ್ ದರ ಕೂಡ ಕಡಿಮೆ ಇಲ್ಲ. ಪ್ರತಿ ವರ್ಷ ಫೆಬ್ರವರಿ ತಿಂಗಳಲ್ಲಿ ಮೆಟ್ರೋ ಪ್ರಯಾಣ ದರ ಏರಿಕೆ ಬಗ್ಗೆ ಬಿಎಂಆರ್ಸಿಎಲ್ ನಿರ್ಧರಿಸಿದೆ. ಇದಕ್ಕೆ ಸಂಬಂಧಪಟ್ಟಂತೆ ಬೋರ್ಡ್ ಮೀಟಿಂಗ್ ಕೂಡ ನಡೆದಿದೆ. ಮಹತ್ವ ಚರ್ಚೆ ಬಳಿಕ ದರ ಏರಿಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. 
ಕಳೆದ ವರ್ಷ ಭಾರಿ ಏರಿಕೆಯ ಶಾಕ್ ಕೊಟ್ಟಿದ್ದ ಬಿಎಂಆರ್ಸಿಎಲ್ ಇದೀಗ ಮತ್ತೆ ಪ್ರಯಾಣಿಕರಿಗೆ ದರ ಏರಿಕೆ ಶಾಕ್ ಕೊಡಲು ಮುಂದಾಗಿದೆ. ಬೋರ್ಡ್ ಮೀಟಿಂಗ್ ನಡೆದಿದ್ದು, ದರ ಏರಿಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. 
ನಮ್ಮ ಮೆಟ್ರೋ ದರ ಏರಿಕೆ ಸಮಿತಿಯ ಶಿಫಾರಸ್ಸಿನಂತೆ ಪ್ರತಿ ವರ್ಷ ಫೆಬ್ರವರಿಯಲ್ಲಿ ದರ ಏರಿಕೆ ಮಾಡಬೇಕಿದ್ದು, ಇದೀಗ ಸಭೆಯಲ್ಲಿ ಶೇಕಡಾ 5 ರಷ್ಟು ದರ ಏರಿಕೆ ಮಾಡಲು ನಮ್ಮ ಮೆಟ್ರೋ ಅಧಿಕಾರಿಗಳು ತೀರ್ಮಾನಿಸಿದ್ದಾರೆ ಎನ್ನಲಾಗ್ತಿದೆ. ಈ ವರ್ಷ ಟಿಕೆಟ್ ದರ ಏರಿಕೆ ಮಾಡಿದ್ರೆ, ಮುಂದಿನ ವರ್ಷ ಶೇ.10% ರಷ್ಟು ದರ ಏರಿಕೆ ಮಾಡಬೇಕಾಗುತ್ತದೆ ಎಂದು BMRCL ತಿಳಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.