2026-07-23 08:33:54

tomorrow bharat bundh services hit ನಾಳೆ ಭಾರತ್‌ ಬಂದ್;‌ ಈ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ Speed News Kannada

tomorrow bharat bundh services hit ನಾಳೆ ಭಾರತ್‌ ಬಂದ್;‌ ಈ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ Speed News Kannada

ನವದೆಹಲಿ: ಕೇಂದ್ರ ಸರ್ಕಾರದ ಕಾರ್ಮಿಕ ನೀತಿಗಳನ್ನು ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ನಾಳೆ ಗುರುವಾರ, (ಫೆ.12) 'ಭಾರತ ಬಂದ್‌'ಗೆ ಕರೆ ನೀಡಿವೆ. ಬಂದ ಪರಿಣಾಮ ಬ್ಯಾಂಕಿಂಗ್, ಸಾರಿಗೆ ಹಾಗೂ ಇತರ ಕೆಲವು ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. 
ಸಂಯುಕ್ತ ಕಿಸಾನ್ ಮೋರ್ಚಾದ(ಎಸ್‌ ಕೆ ಎಂ), ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಐಎನ್‌ಟಿಯುಸಿ), ಆಲ್‌ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ), ಹಿಂದ್ ಮಜ್ದೂರ್ ಸಭಾ (ಎಚ್‌ಎಂಎಸ್), ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ ಸೇರಿದಂತೆ ಹತ್ತಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.
ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್  ಅವರು ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರದ ಕಾರ್ಮಿಕ, ಕೃಷಿ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ಈ ಬಂದ್‌ ಆಚರಿಸಲಾಗುತ್ತಿದೆ. ಈ ಮುಷ್ಕರದಲ್ಲಿ ದೇಶದ 30 ಕೋಟಿಗೂ ಹೆಚ್ಚು  ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ. 
2025ರ ನವೆಂಬರ್‌ ನಲ್ಲಿ ಜಾರಿಗೆ ತಂದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಲಾಗಿದೆ. ಬಿತ್ತನೆ ಬೀಜಗಳ ಮಸೂದೆ–2025, ವಿದ್ಯುತ್ ತಿದ್ದುಪಡಿ ಮಸೂದೆ ಮತ್ತು ಪರಮಾಣು ಶಕ್ತಿಯ ಸುಸ್ಥಿರ ಬಳಕೆ ಹಾಗೂ ಪ್ರಗತಿ ನಿಟ್ಟಿನಲ್ಲಿ ಭಾರತ ಪರಿವರ್ತನೆ (ಶಾಂತಿ) ಮಸೂದೆಯನ್ನು ‌ಹಿಂಪಡೆಯಬೇಕು ಎಂದು ಖಾರ್ಮಿಕ ಸಂಘಟನೆಗಳು ಆಗ್ರಹಪಡಿಸಿವೆ.
‌ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಮರುಸ್ಥಾಪಿಸಬೇಕು ವಿಬಿಜಿ ರಾಮ್‌ ಜಿ ಯೋಜನೆ ಮತ್ತು ಭಾರತ- ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ರದ್ದುಗೊಳಿಸಬೇಕು ಎಂದೂ ಒತ್ತಾಯಿಸಿವೆ.
ಕಾರ್ಮಿಕ ಸಂಘಟನೆಗಳ ಮೂಲಗಳ ಪ್ರಕಾರ  ಒಡಿಶಾ ಮತ್ತು ಅಸ್ಸಾಂ ಸಂಪೂರ್ಣ ಬಂದ್‌ ಆಗಲಿದೆ. ಇತರ ರಾಜ್ಯಗಳ ಮೇಲೂ ಮುಷ್ಕರದ ಪರಿಣಾಮ ಬೀರಲಿದೆ ಎಂದು ತಿಳಿದು ಬಂದಿದೆ.
ದೇಶದಾದ್ಯಂತ ಶಾಲೆ, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳನ್ನು ಬಂದ್‌ ಮಾಡುವ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ., ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ, ಶಿಕ್ಷಕರು ಮತ್ತು ವಿದ್ಯಾರ್ಥಿ ಸಂಘಟನೆಗಳು ಬಂದ್‌ ಗೆ ಬೆಂಬಲ ಘೋಷಿಸಿವೆ. 

ಸಾರಿಗೆ ಮತ್ತು ಬ್ಯಾಂಕಿಂಗ್‌ ಸೇವೆ, ಆಸ್ಪತ್ರೆ ಮತ್ತು ಆಂಬುಲೆನ್ಸ್ ಸೇವೆಗಳಲ್ಲಿ ಅಡಚಣೆ ಉಂಟಾಗಬಹುದು. 
ಬ್ಯಾಂಕಿಂಗ್ ಸೇವೆಗಳಲ್ಲಿ ಕೊರತೆ ಉಂಟಾಗಬಹುದು. ಬ್ಯಾಂಕ್ ಆಫ್ ಬರೋಡಾ, ಎಸ್‌ಬಿಐ, ಪಿಎನ್‌ಬಿ ಮತ್ತು ಇನ್ನೂ ಅನೇಕ ಬ್ಯಾಂಕುಗಳ ನೌಕರರು ಮುಷ್ಕರದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.