2026-06-05 11:49:08

ನಾಳೆ ಯುಜಿ ಸಿಇಟಿ-2026 ಫಲಿತಾಂಶ; ನೋಡುವುದು ಹೇಗೆ? ಇಲ್ಲಿದೆ ಮಾಹಿತಿ|Speed News Kannada

ನಾಳೆ ಯುಜಿ ಸಿಇಟಿ-2026 ಫಲಿತಾಂಶ; ನೋಡುವುದು ಹೇಗೆ? ಇಲ್ಲಿದೆ ಮಾಹಿತಿ|Speed News Kannada

ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ಯುಜಿ ಸಿಇಟಿ-2026 ಫಲಿತಾಂಶ ನಾಳೆ, ಜೂನ್ 6ರಂದು ಪ್ರಕಟವಾಗಲಿದೆ.  ಸಚಿವ ಡಾ.ಶರಣಪ್ರಕಾಶ ಪಾಟೀಲ  ಅವರು ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟಿಸಲಿದ್ದಾರೆ. ನಂತರ ಮಧ್ಯಾಹ್ನ 2 ಗಂಟೆಯಿಂದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಆನ್‌ಲೈನ್ ಮೂಲಕ ವೀಕ್ಷಿಸಬಹುದಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆಯಲ್ಲಿ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಎಂಜಿನಿಯರಿಂಗ್, ಫಾರ್ಮಸಿ, ಕೃಷಿ, ವೆಟರಿನರಿ, ಬಿಎಸ್ಸಿ ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಸಿಇಟಿ ರ‍್ಯಾಂಕ್ ಅಗತ್ಯವಾಗಿದೆ. ಹೀಗಾಗಿ ಫಲಿತಾಂಶದ ಮೇಲೆ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಫಲಿತಾಂಶ ನೋಡುವುದು ಹೇಗೆ?

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಕೆಇಎ ಅಧಿಕೃತ ವೆಬ್‌ಸೈಟ್ ಮೂಲಕ ಪರಿಶೀಲಿಸಬಹುದು. ಫಲಿತಾಂಶ ವೀಕ್ಷಿಸಲು ಅರ್ಜಿ ಸಂಖ್ಯೆ ಹಾಗೂ ವಿದ್ಯಾರ್ಥಿಯ ಹೆಸರಿನ ಮೊದಲ ನಾಲ್ಕು ಅಕ್ಷರಗಳನ್ನು ನಮೂದಿಸಬೇಕಾಗುತ್ತದೆ. ಫಲಿತಾಂಶ ಪ್ರಕಟವಾದ ಬಳಿಕ ರ‍್ಯಾಂಕ್ ಕಾರ್ಡ್ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

 

 

Share:


Tags:

cet result

Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.