2026-06-08 06:44:39

Transfer of power | ಅಧಿಕಾರ ಹಸ್ತಾಂತರ ಸಮಯ ಬಂದಾಗ ಸಿದ್ದರಾಮಯ್ಯ ಅವರೇ ಹೇಳುತ್ತಾರೆ ಡಿಕೆ ಶಿವಕುಮಾರ್‌ | Speed News Kannada

Transfer of power | ಅಧಿಕಾರ ಹಸ್ತಾಂತರ ಸಮಯ ಬಂದಾಗ ಸಿದ್ದರಾಮಯ್ಯ ಅವರೇ ಹೇಳುತ್ತಾರೆ ಡಿಕೆ ಶಿವಕುಮಾರ್‌ | Speed News Kannada

ಬೆಂಗಳೂರು : ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ ಮಹದೇವಪ್ಪ  ಅವರೂ ನಮ್ಮ ಹೈಕಮಾಂಡ್ ಭಾಗವಾಗಿದ್ದು, ಅವರ ಬಗ್ಗೆ ಈಗ ನಾನು ಏನನ್ನೂ ಮಾತನಾಡುವುದಿಲ್ಲ. ಈ ಬಗ್ಗೆ ಪಕ್ಷವೇ ತೀರ್ಮಾನ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ರಾಜ್ಯ ಚುನಾವಣಾ ಆಯೋಗದ ಕಚೇರಿ ಬಳಿ ಮಾಧ್ಯಮಗಳ ಜತೆ ಅವರು ಮಾತನಾಡಿದರು.
ಅಧಿಕಾರ ಹಂಚಿಕೆ ಕುರಿತು ಸಚಿವ ಮಹದೇವಪ್ಪ ಅವರು ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಮಹದೇವಪ್ಪ ಈಗ ದೊಡ್ಡವರು. ಅವರ ಹೇಳಿಕೆ ಬಗ್ಗೆ ಮುಖ್ಯಮಂತ್ರಿ ಮತ್ತು  ಹೈಕಮಾಂಡ್ ಕ್ರಮ ಕೈಗೊಳ್ಳುತ್ತಾರೆ. ಮಹದೇವಪ್ಪನಿಗೆ ಹಾಗೂ ಇತರರಿಗೆ ಉತ್ತರ ನೀಡಲು ನಾನು ಸಿದ್ಧನಿಲ್ಲ ಎಂದರು. 
ಅಧಿಕಾರ ಹಂಚಿಕೆ ಕುರಿತು ಈ ಹಿಂದೆ ಹೇಳಿದಂತೆ ನಾನು, ಸಿದ್ದರಾಮಯ್ಯನವರು ಹಾಗೂ ಹೈಕಮಾಂಡ್ ಎಲ್ಲರೂ ಸೇರಿ ತೆಗೆದುಕೊಂಡಿರುವ ಒಮ್ಮತದ ತೀರ್ಮಾನ. ಈ ತೀರ್ಮಾನ ಏನು ಎಂಬುದು ಸಮಯ ಬಂದಾಗ ತಿಳಿಯುತ್ತದೆ. ಇದು ಕದ್ದುಮುಚ್ಚಿ ಮಾಡಿಕೊಂಡಿರುವ ಗುಟ್ಟಿನ ವ್ಯವಹಾರವಲ್ಲ. ಸಿದ್ದರಾಮಯ್ಯ ಅವರೇ ಸಮಯ ಬಂದಾಗ ರಾಜ್ಯದ ಜನಕ್ಕೆ ಸಂದೇಶ ನೀಡುತ್ತಾರೆ ಎಂದು ಹೇಳಿದರು.
ಶಾಸಕರ ವಿದೇಶ ಪ್ರವಾಸ ಗೊತ್ತಿಲ್ಲ:
ಶಾಸಕರ ವಿದೇಶ ಪ್ರವಾಸ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ಮಾಧ್ಯಮಗಳಿಂದಷ್ಟೇ ನನಗೂ ತಿಳಿದಿದೆ. ಇದು ಅವರ ವೈಯಕ್ತಿಕ ಪ್ರವಾಸವೋ, ಬೇರೆಯವರು ಅವರನ್ನು ಕಳುಹಿಸುತ್ತಿದ್ದಾರೋ ಗೊತ್ತಿಲ್ಲ. ಪ್ರವಾಸ ಕಳುಹಿಸುತ್ತಿರುವವರೂ ಉಂಟು ಹಾಗೂ ಪ್ರವಾಸ ಹೋಗುತ್ತಿರುವವರೂ ಉಂಟು. ಪಕ್ಷದ ಅಧ್ಯಕ್ಷನಾಗಿ ನಾನು ಈ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.