2026-03-07 06:12:57

Transport companies are in losses | ಸಾರಿಗೆ ಸಂಸ್ಥೆಗಳು ನಷ್ಟದಲ್ಲಿದ್ದು ವೇತನ ಕೊಡಲೂ ಕಷ್ಟವಿದೆ ಹೈಕೋರ್ಟ್‌ ಗೆ ಸರ್ಕಾರ ಮಾಹಿತಿ | Speed News Kannada

Transport companies are in losses | ಸಾರಿಗೆ ಸಂಸ್ಥೆಗಳು ನಷ್ಟದಲ್ಲಿದ್ದು ವೇತನ ಕೊಡಲೂ ಕಷ್ಟವಿದೆ ಹೈಕೋರ್ಟ್‌ ಗೆ ಸರ್ಕಾರ ಮಾಹಿತಿ | Speed News Kannada

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು ನಷ್ಟವನ್ನು ಅನುಭವಿಸುತ್ತಿವೆ ಕರ್ನಾಟಕ ಸರ್ಕಾರವೇ ಒಪ್ಪಿಕೊಂಡಿದೆ.
ಹೈಕೋರ್ಟ್‌ ನಲ್ಲಿ ಪ್ರಕರಣವೊಂದರ ವಿಚಾರಣೆ   ಸಂದರ್ಭದಲ್ಲಿ ಸಿಬ್ಬಂದಿಗೆ ವೇತನ ನೀಡುವುದೇ ಕಷ್ಟವೆಂಬ ಪರಿಸ್ಥಿತಿ ಇದೆ ಎಂದು ಹೈಕೋರ್ಟ್ಗೆ ಸಾರಿಗೆ ನಿಗಮಗಳ ಪರ ವಕೀಲ ಒಪ್ಪಿಕೊಂಡಿದ್ದಾರೆ.
 ಕೊವಿಡ್ ವೇಳೆ ಮೃತಪಟ್ಟ ಸಾರಿಗೆ ಸಿಬ್ಬಂದಿಗೆ ಪರಿಹಾರ ಕುರಿತು ದಾವಣಗೆರೆಯ ತಾಹಿರ್ ಹುಸೇನ್ ಎಂಬುವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಕೊವಿಡ್ ಸಂದರ್ಭದಲ್ಲಿ ಸಾರಿಗೆ ಇಲಾಖೆಯ 323 ಉದ್ಯೋಗಿಗಳು ಮೃತಪಟ್ಟಿದ್ದಾರೆ. ಆದರೆ 7 ಕುಟುಂಬಗಳಿಗೆ ಮಾತ್ರ 30 ಲಕ್ಷ ರೂ. ಪರಿಹಾರ ನೀಡಲಾಗಿದೆ. ಉಳಿದವರಿಗೆ ಹಣ ನೀಡಿಲ್ಲವೆಂದು ಅರ್ಜಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಯುವಾಗ ಸರ್ಕಾರಿ ವಕೀಲರು ವಾದಿಸಿ ಸಾರಿಗೆ ನಿಗಮಗಳು ನಷ್ಟದಲ್ಲಿ ನಡೆಯುತ್ತಿವೆ. ಸಿಬ್ಬಂದಿಗೆ ವೇತನ ನೀಡುವುದೇ ಕಷ್ಟವೆಂಬ ಪರಿಸ್ಥಿತಿ ಇದೆ. ಹೀಗಾಗಿ ಕೋವಿಡ್‌ ಪರಿಹಾರ ನಿರ್ಣಯ ಜಾರಿಗೊಳಿಸದಿರಲು ನಿಗಮಗಳು ನಿರ್ಧರಿಸಿವೆ ಎಂದರು.
ನಂತರ ನ್ಯಾಯಾಲಯ ಶಕ್ತಿ ಯೋಜನೆಯಡಿ ಸರ್ಕಾರ ಎಷ್ಟು ಹಣ ಬಾಕಿ ಉಳಿಸಿಕೊಂಡಿದೆ? ಸಾರಿಗೆ ನಿಗಮಗಳಿಗೆ ನೀಡಬೇಕಾದ ಬಾಕಿಯ ವಿವರ ಮಾರ್ಚ್ 23ರೊಳಗೆ ನೀಡುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.