2026-03-07 06:10:39

Transport workers strike called off | ಸರ್ಕಾರದ ಭರವಸೆ ಸಾರಿಗೆ ನೌಕರರ ಮುಷ್ಕರ ವಾಪಸ್ | Speed News Kannada

Transport workers strike called off | ಸರ್ಕಾರದ ಭರವಸೆ ಸಾರಿಗೆ ನೌಕರರ ಮುಷ್ಕರ ವಾಪಸ್ | Speed News Kannada

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಗೆ ಆಗ್ರಹಿಸಿ 'ಬೆಂಗಳೂರು ಚಲೋ' ಪ್ರತಿಭಟನೆ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ವೇತನ ಪರಿಷ್ಕರಣೆ ಆದೇಶ ಹಾಗೂ ಹಲವು ತಿಂಗಳ ಹಿಂಬಾಕಿ ನೀಡಲು ಮಾರ್ಚ್ 2ರ ಗಡುವು ನೀಡಿದೆ.
ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದ ಫ್ರೀಡಂ ಪಾರ್ಕ್‌ ಗೆ ಆಗಮಿಸಿದ  KSRTC ಎಂಡಿ ಅಕ್ರಂ ಪಾಷಾ ಅವರು ಮುಖಮಡರೊಂದಿಗೆ ಮಾತುಕತೆ ನಡೆಸಿದರು. ಆರಂಭದಲ್ಲಿ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟು ಹಿಡಿದಿದ್ದ ಸಾರಿಗೆ ನೌಕರರು ಅಂತಿಮವಾಗಿ ಸರ್ಕಾರದ ಭರವಸೆಯನ್ನು ಒಪ್ಪಿಕೊಂಡರು.
ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರಿಗೆ ಬಸ್‌ ಗಳು ಎಂದಿನಂತೆ ಸಂಚರಿಸಲಿವೆ. 
ಬಜೆಟ್‌ ನಂತರ ವೇತನ ಪರಿಷ್ಕರಣೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ. ಬೇಡಿಕೆಗಳು ಈಡೇರಿದಿದ್ದರೆ ಮಾರ್ಚ್‌ 2ರ ನಂತರ ಮತ್ತೆ ಹೋರಾಟ ಆರಂಭಿಸಲು ಸಾರಿಗೆ ನೌಕರರ ಜಂಟಿ ಕ್ರಿಯಾಸಮಿತಿ ನಿರ್ಧರಿಸಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.