2026-07-23 09:19:44

Tree falls on car, crushes it in JP Nagar|ಜೆಪಿ ನಗರದಲ್ಲಿ ಕಾರಿನ ಮೇಲೆ ಮರ ಬಿದ್ದು ನಜ್ಜುಗುಜ್ಜು|Speed News Kannada

Tree falls on car, crushes it in JP Nagar|ಜೆಪಿ ನಗರದಲ್ಲಿ ಕಾರಿನ ಮೇಲೆ ಮರ ಬಿದ್ದು ನಜ್ಜುಗುಜ್ಜು|Speed News Kannada

ಬೆಂಗಳೂರು ಜೆಪಿ ನಗರ 24ನೇ ಮೇನ್ ರಸ್ತೆಯಲ್ಲಿ ನಿಂತಿದ್ದ ಕಾರಿನ ಮೇಲೆ ಭಾರೀ ಮಳೆಗೆ ಬೃಹತ್ ಮರವೊಂದು ಬಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ. ನಿನ್ನೆ ಸಂಜೆ ನಡೆದ ಈ ಘಟನೆ ಬಳಿಕ 12 ಗಂಟೆಗಳಾದರೂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿಲ್ಲ.ಮರ ಬಿದ್ದ ಪರಿಣಾಮ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿ, ವಾಹನಗಳು ಒಂದೇ ಬದಿಯಲ್ಲಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮರದ ಕೊಂಬೆಗಳು ವಾಹನಗಳಿಗೆ ತಗುಲಿ ತೊಂದರೆ ಉಂಟುಮಾಡುತ್ತಿದ್ದು, BMTC ಬಸ್‌ನ ಸೈಡ್ ಮಿರರ್ ಕೂಡ ಹಾನಿಯಾಗಿದೆ. ಸ್ಥಳೀಯರು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.