ಅಂತರಾಷ್ಟ್ರೀಯ ರಾಜಕೀಯದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ ಅಮೆರಿಕ. ಇರಾನ್ ಮತ್ತು ಚೀನಾ ನಡುವೆ ಸಂಘರ್ಷ ತೀವ್ರಗೊಳ್ಳುತ್ತಿದೆ.ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಬೆಂಬಲ ನೀಡುತ್ತಿರುವ ಚೀನಾಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇರಾನ್‌ಗೆ ಆಧುನಿಕ ಶಸ್ತ್ರಾಸ್ತ್ರ ಪೂರೈಕೆ ಮಾಡಬೇಡಿ, ಇಲ್ಲದಿದ್ದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್ ವಿರುದ್ಧವೂ ಟ್ರಂಪ್ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದು, ಇರಾನ್ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ತಿಳಿಸಿದ್ದಾರೆ.
ಇನ್ನೊಂದೆಡೆ, ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಣೆಯನ್ನು ಅಡ್ಡಿಪಡಿಸಲು ಯತ್ನಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದನ್ನು ಅಮೆರಿಕ ಯಾವುದೇ ರೀತಿಯಲ್ಲೂ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.ಅಮೆರಿಕದ ಆರೋಪದ ಪ್ರಕಾರ, ಚೀನಾ ಇರಾನ್‌ಗೆ ಶಸ್ತ್ರಾಸ್ತ್ರ ಮತ್ತು ತಂತ್ರಜ್ಞಾನ ಸಹಾಯ ಒದಗಿಸುತ್ತಿದ್ದು, ಇದು ಜಾಗತಿಕ ಶಾಂತಿಗೆ ಭೀತಿ ಉಂಟುಮಾಡುತ್ತಿದೆ.ಈ ಬೆಳವಣಿಗೆಗಳ ನಡುವೆ ಪಶ್ಚಿಮ ಏಷ್ಯಾದ ಪರಿಸ್ಥಿತಿ ಗಂಭೀರವಾಗಿದ್ದು, ದೊಡ್ಡ ಶಕ್ತಿಗಳ ನಡುವಿನ ಈ ಉದ್ವಿಗ್ನತೆ ಜಗತ್ತಿನ ಮಟ್ಟದಲ್ಲಿ ಆತಂಕ ಸೃಷ್ಟಿಸಿದೆ.