2026-06-08 03:56:03

Trump says Iran rescued missing US pilot|ಇರಾನ್ ನಾಪತ್ತೆಯಾಗಿದ್ದ ಅಮೆರಿಕ ಪೈಲೆಟ್‌ ರಕ್ಷಣೆ, ಟ್ರಂಪ್‌|Speed News Kannada

Trump says Iran rescued missing US pilot|ಇರಾನ್ ನಾಪತ್ತೆಯಾಗಿದ್ದ ಅಮೆರಿಕ ಪೈಲೆಟ್‌ ರಕ್ಷಣೆ, ಟ್ರಂಪ್‌|Speed News Kannada

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿದೆ. ಅಮೆರಿಕ ಮತ್ತು ಇರಾನ್‌ ನಡುವಿನ ಸಂಘರ್ಷ ಮತ್ತಷ್ಟು ಗಂಭೀರವಾಗುತ್ತಿದೆ.ಇರಾನ್‌ನಲ್ಲಿ ನಡೆದ ಎರಡು ಪ್ರತ್ಯೇಕ ವಿಮಾನ ಅಪಘಾತಗಳ ನಂತರ ನಾಪತ್ತೆಯಾಗಿದ್ದ ಅಮೆರಿಕನ್ ಪೈಲಟ್‌ ಪತ್ತೆಯಾಗಿದ್ದಾರೆ ಎಂದು ಡೊನಾಲ್ಡ್‌ ಟ್ರಂಪ್‌ ತಿಳಿಸಿದ್ದಾರೆ.


ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಈ ಕಾರ್ಯಾಚರಣೆಯನ್ನು ಅಮೆರಿಕದ ಇತಿಹಾಸದಲ್ಲೇ ಅತ್ಯಂತ ಧೈರ್ಯಶಾಲಿ ರಕ್ಷಣಾ ಕಾರ್ಯಾಚರಣೆಗಳಲ್ಲಿ ಒಂದೆಂದು ಹೇಳಿದ್ದಾರೆ. ಎರಡು ದಿನಗಳ ಬಳಿಕ ಪೈಲಟ್‌ರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.F-15E ಯುದ್ಧ ವಿಮಾನವು ಪತನಗೊಂಡಿದ್ದು, ಇಬ್ಬರು ಸಿಬ್ಬಂದಿಯಲ್ಲೊಬ್ಬರನ್ನು ತಕ್ಷಣವೇ ರಕ್ಷಿಸಲಾಯಿತು. ಇನ್ನೊಬ್ಬರು ನಾಪತ್ತೆಯಾಗಿದ್ದರು.


ಇದಕ್ಕೂ ನಡುವೆ, ಇರಾನ್ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಮುಂದುವರೆಸಿದ್ದು, ಬುಶೆಹ್ರ್ ಪರಮಾಣು ಸೌಲಭ್ಯ ಪ್ರದೇಶದ ಮೇಲೆ ದಾಳಿ ನಡೆದಿರುವ ಮಾಹಿತಿ ಇದೆ.
ಅಮೆರಿಕದ ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದೇವೆ ಎಂದು ಇರಾನ್ ಹೇಳಿಕೊಂಡಿದೆ.ಪೈಲಟ್ ಪತ್ತೆಗೆ ಇರಾನ್ ದೊಡ್ಡ ಮಟ್ಟದ ಶೋಧ ಕಾರ್ಯಾಚರಣೆ ನಡೆಸಿದ್ದು, ಮಾಹಿತಿ ನೀಡುವವರಿಗೆ 60,000 ಡಾಲರ್ ಬಹುಮಾನ ಘೋಷಿಸಿತ್ತು.


ಇರಾನ್ ಹಲವು ಬಾರಿ F-35  ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದೇವೆ ಎಂದು ಹೇಳಿದರೂ, ಅಮೆರಿಕದ ಸೆಂಟ್ರಲ್ ಕಮಾಂಡ್ ಆ ಆರೋಪಗಳನ್ನು ತಳ್ಳಿಹಾಕಿದೆ.ಒಟ್ಟಿನಲ್ಲಿ, ಅಮೆರಿಕ-ಇರಾನ್ ನಡುವಿನ ಸಂಘರ್ಷ ದಿನೇದಿನೇ ತೀವ್ರಗೊಳ್ಳುತ್ತಿದ್ದು, ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚಿಸಿದೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.