2026-05-20 09:50:48

ತ್ವಿಶಾ ವಿರುದ್ಧ ಡ್ರಗ್ಸ್‌ ಆರೋಪ ಹೊರಿಸಿದ ಅತ್ತೆ ತಾಯಿ ಗಿರಿಬಾಲಾ ಸಿಂಗ್ |Speed News Kannada

 ತ್ವಿಶಾ ವಿರುದ್ಧ ಡ್ರಗ್ಸ್‌ ಆರೋಪ ಹೊರಿಸಿದ ಅತ್ತೆ ತಾಯಿ ಗಿರಿಬಾಲಾ ಸಿಂಗ್ |Speed News Kannada

ಭೋಪಾಲ್: ಮಧ್ಯ ಪ್ರದೇಶದ ಭೋಪಾಲ್‌ನ 33 ವರ್ಷದ ಮಾಡೆಲ್‌ ನಟಿ ತ್ವಿಶಾ ಶರ್ಮಾ ಅವರ ಸಾವಿನ ಪ್ರಕರಣವನ್ನು ಪೊಲೀಸರು ವರದಕ್ಷಿಣೆ ಕಿರುಕುಳದ ಆರೋಪದ ಅಡಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಈ ಮಧ್ಯೆ ತ್ವಿಶಾ ಅವರ ಅತ್ತೆ ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ತಮ್ಮ ಸೊಸೆಯ ಮೇಲೆ ಸಾಲು ಸಾಲು ಆರೋಪ ಹೊರಿಸಿದ್ದಾರೆ

ತ್ವಿಶಾ ಮಾದಕ ವಸ್ತು ಸೇವಿಸುತ್ತಿದ್ದರು. ಗರ್ಭಿಣಿಯಾಗಿದ್ದರೂ ಗಾಂಜಾ ಸೇವಿಸುತ್ತಿದ್ದಳು. ಮಾನಸಿಕ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದಳು ಮತ್ತು ಆಕೆಯ ಪೋಷಕರೇ ತಿಂಗಳುಗಟ್ಟಲೆ ದೂರವಿಟ್ಟಿದ್ದರು ಎಂದು ಆರೋಪಿಸಿದ್ದಾರೆ.

ತ್ವಿಶಾ ತಂದೆ ನವನಿಧಿ ಶರ್ಮಾ ಅಳಿಯನ ಕುಟುಂಬದವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ವರದಕ್ಷಿಣೆಗಾಗಿ ಒತ್ತಡ ಮತ್ತು ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ. ಅಳಿಯ ಸಮರ್ಥ್ ಹಾಗೂ ಆತನ ತಾಯಿ ಗಿರಿಬಾಲಾ ಸಿಂಗ್ ವಿರುದ್ಧ ಕೊಲೆ ಮತ್ತು ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಲಾಗಿದೆ.

ಮೇ 12ರಂದು ಭೋಪಾಲ್‌ನ ತನ್ನ ಪತಿಯ ಮನೆಯಲ್ಲಿ ತ್ವಿಶಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಡೇಟಿಂಗ್‌ ಆ್ಯಪ್‌ನಲ್ಲಿ ಇಬ್ಬರಿಗೂ ಪರಸ್ಪರ ಪರಿಚಯವಾಗಿತ್ತು. ಕೊನೆಗೆ ಎರಡೂ ಕುಟುಂಬದವರನ್ನು ಒಪ್ಪಿಸಿ ಮದುವೆ ಮಾಡಿಕೊಂಡಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.