2026-06-25 04:04:03

Two people including a girl die in a horrific accident in Byndoor, Udupi | ಉಡುಪಿ ಬೈಂದೂರಿನಲ್ಲಿ ಭೀಕರ ಅಪಘಾತ, ಬಾಲಕಿ ಸೇರಿ ಇಬ್ಬರು ಸಾವು | Speed news kannada

Two people including a girl die in a horrific accident in Byndoor, Udupi | ಉಡುಪಿ ಬೈಂದೂರಿನಲ್ಲಿ ಭೀಕರ ಅಪಘಾತ, ಬಾಲಕಿ ಸೇರಿ ಇಬ್ಬರು ಸಾವು | Speed news kannada

ಉಡುಪಿಯ ಬೈಂದೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಂತಿದ್ದ ಕಂಟೈನರ್‌ಗೆ ಕಾರು ಬಂದು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಸಾವನಪ್ಪಿದ್ದಾರೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬ ಉಡುಪಿ ಜಿಲ್ಲೆಯ ಹಲವು ಸ್ಥಳಗಳನ್ನು ನೋಡಿಕೊಂಡು ನಂತರ ಮುರುಡೇಶ್ವರಕ್ಕೆ ಹೋಗುವ ಸಮಯ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ತಾಯಿ ಮತ್ತು ಮಗಳು ಮೃತಪಟ್ಟಿದ್ದರೆ, ಪತಿ, ಇಬ್ಬರು ಮಕ್ಕಳು ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಮಮತಾ(36) ಹಾಗೂ ಮಗಳು ಧೃತಿಕಾ(14) ಪ್ರಾಣ ಬಿಟ್ಟಿದ್ದು, ಪತಿ ರಾಘು(40), ಮಕ್ಕಳಾದ ಜಾಹ್ನವಿ(12), ಚಾರ್ವಿ(10) ಹಾಗೂ ಕಾರು ಚಾಲಕ ಕಿರಣ್​​ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದ ನಿವಾಸಿಗಳು ಎಂಬುದು ತಿಳಿದುಬಂದಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.