2026-07-23 11:17:23

Two students die in horrific road accident near Trasi beach|ತ್ರಾಸಿ ಬೀಚ್ ಬಳಿ ಭೀಕರ ರಸ್ತೆ ಅಪಘಾತ, ಇಬ್ಬರು ವಿದ್ಯಾರ್ಥಿಗಳು ಸಾವು|Speed News Kannada

Two students die in horrific road accident near Trasi beach|ತ್ರಾಸಿ ಬೀಚ್ ಬಳಿ ಭೀಕರ ರಸ್ತೆ ಅಪಘಾತ, ಇಬ್ಬರು ವಿದ್ಯಾರ್ಥಿಗಳು ಸಾವು|Speed News Kannada

ಬೇಸಿಗೆ ರಜೆಯ ಮೋಜಿನ ಪ್ರವಾಸವೊಂದು ಭೀಕರ ದುರಂತದಲ್ಲಿ ಅಂತ್ಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಬೀಚ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಶಿವಮೊಗ್ಗದ ಶಂಕರಘಟ್ಟದ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.ಮುರುಡೇಶ್ವರ ದರ್ಶನ ಮುಗಿಸಿ ಉಡುಪಿಯತ್ತ ಪ್ರಯಾಣಿಸುತ್ತಿದ್ದ ಬಸ್, ತ್ರಾಸಿ ಬೀಚ್ ಸಮೀಪದ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೊದಲು ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಹಾಗೂ ನಂತರ ಟ್ರಕ್ ಒಂದಕ್ಕೆ ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ಸಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಸ್ಸಿನಲ್ಲಿ ಒಟ್ಟು 47 ಮಂದಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಗಂಭೀರವಾಗಿ ಗಾಯಗೊಂಡಿರುವ ಹಲವರನ್ನು ಕುಂದಾಪುರದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಘಟನೆ ನಡೆದ ಕೂಡಲೇ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.