2026-06-25 02:37:31

Two women die after drowning in lake | ಕೂಡ್ಲಿಗಿ ಕೆರೆಯಲ್ಲಿ ಮುಳುಗಿ ಇಬ್ಬರು ಮಹಿಳೆಯರ ಸಾವು | Speed News Kannada

Two women die after drowning in lake | ಕೂಡ್ಲಿಗಿ ಕೆರೆಯಲ್ಲಿ ಮುಳುಗಿ ಇಬ್ಬರು ಮಹಿಳೆಯರ ಸಾವು | Speed News Kannada

ಕೂಡ್ಲಿಗಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಗಂಡಬೊನ್ನಹಳ್ಳಿ ಗ್ರಾಮದ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಮಹಿಳೆಯರು ನೀರಿನಲ್ಲಿ ಮುಳುಗಿ ಮೃತಪಟ್ಟು, ನಾಲ್ವರು ಅಸ್ವಸ್ಥಗೊಂಡ ಘಟನೆ ಶನಿವಾರ ನಡೆದಿದೆ. ಸರೋಜಮ್ಮ (35) ಸುಜಾತ( 28) ಮೃತಪಟ್ಟವರು.
ತಾಲ್ಲೂಕಿನ ಗುಡೇಕೋಟೆಯಲ್ಲಿ ನಡೆದಿದ್ದ ಕೋಡಿ ದುರುಗಮ್ಮ ಜಾತ್ರೆಗೆಂದು ಬಂದಿದ್ದ ಒಂದೇ ಕುಟುಂಬದ ಹತ್ತಕ್ಕೂ ಹೆಚ್ಚು ಜನ ಗಂಡಬೊನ್ನಹಳ್ಳಿ ಕೆರೆ ಬಳಿ ಹೋಗಿ ಮಧ್ಯಾಹ್ನ ಊಟ ಮಾಡಿಕೊಂಡು ಕೆರೆಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ಸದೋಜಮ್ಮ ಹಾಗೂ ಸುಜಾತ ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಉಳಿದಂತೆ ಶ್ರಾವಣ, ಭೂಮಿಕ, ಅನಿತ ಸಂಗೀತಾ ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಡೇಕೋಟೆ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.