ಬೆಂಗಳೂರು : ವಿಧಾನಸಭಾ ಕಲಾಪ ನಲ್ಲಿ ಸೋಮವಾರ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ಯಾವುದೇ ಸಮಯ ನಿಗದಿ ಪಡಿಸದೆ ಸ್ಪೀಕರ್ ಯುಟಿ ಖಾದರ್ ಕಲಾಪ ಮುಂದೂಡಿದ್ದಾರೆ. ಶಾಸಕರ ಪ್ರಶ್ನೆಗಳಿಗೆ ಸಚಿವರು ಹಾಗೂ ಸರ್ಕಾರ ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆದ ಸ್ಪೀಕರ್ ಯು.ಟಿ.
ಖಾದರ್ ಸಮಯ ಹೇಳದೆ ಕಲಾಪವನ್ನು ಮುಂದೂಡಿರುವ ಪ್ರಸಂಗ ಜರುಗಿದೆ . ವಿಪಕ್ಷ ಶಾಸಕರ ಪ್ರಶ್ನೆಗೆ ಸಚಿವರು ಉತ್ತರ ಕೊಡುತ್ತಿಲ್ಲ ಮಿನಿಸ್ಟರ್ ನಡೆಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್ ಉತ್ತರ ಕೊಡದಿರಲು ಕಾರಣ ಹೇಳುವವರೆಗೂ ಸದನ ನಡೆಸಲ್ಲ ಎಂದು ಕಲಾಪ ಮೊಟಕು ಮಾಡಿ ಪೀಠದಿಂದ ತೆರಳಿದ್ದಾರೆ.
ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಉತ್ತರ ಮಂಡನೆ ವೇಳೆ ಈ ಪ್ರಸಂಗ ನಡೆದಿದೆ. ಸರ್ಕಾರದ ಧೋರಣೆಗೆ ಯುಟಿ ಖಾದರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಗಮನ ಸೆಳೆಯುವ ಪ್ರಶ್ನೆಗೆ ಸಚಿವರು ಉತ್ತರ ಕೊಡಲ್ಲ. ಮೂರು ಸಲ ಸಚಿವರಿಗೆ ಹೇಳಿದರೂ ಕಲಾಪದಲ್ಲಿ ಸುಧಾರಣೆ ಕಂಡು ಬರುತ್ತಿಲ್ಲ. ಸಂಬಂಧಿಸಿದ ಸಚಿವರು ಬಂದು ಸ್ಪಷ್ಟತೆ ಹಾಗೂ ಕಾರಣ ಕೊಡಬೇಕು. ಅಲ್ಲಿಯವರೆಗೂ ನಾನು ಸದನ ನಡೆಸುವುದಿಲ್ಲ ಎಂದು ಖಾರವಾಗಿ ನುಡಿದಿರೋ ಖಾದರ್ ಹೊರನಡೆದಿದ್ದಾರೆ.