2026-07-23 09:07:54

U T Khader | ನೂತನ ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ ಹಂಚಿಕೆ ಸಚಿವ ಯು ಟಿ ಖಾದರ್ ಅವರಿಗೆ 4 ಜಿಲ್ಲೆಗಳ ಜವಾಬ್ದಾರಿ! | SNK

U T Khader | ನೂತನ ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ ಹಂಚಿಕೆ  ಸಚಿವ ಯು ಟಿ ಖಾದರ್ ಅವರಿಗೆ 4 ಜಿಲ್ಲೆಗಳ ಜವಾಬ್ದಾರಿ! | SNK

ಮಂಗಳೂರು : ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಇದೀಗ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಸಚಿವ ಯು ಟಿ ಖಾದರ್ ಅವರಿಗೆ 4 ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಸದ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ ಹಂಚಿಕೆ ಮಾಡಲಾಗಿದೆ. ಸದ್ಯ ಪ್ರತಿಯೊಬ್ಬ ಸಚಿವರಿಗೆ ಎರಡರಿಂದ ಮೂರು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ. ಸಂಪುಟ ವಿಸ್ತರಣೆ ಆದ ಬಳಿಕ ಇದು ಬದಲಾವಣೆ ಆಗುವ ಸಾಧ್ಯತೆ ಇದೆ.
ಮತ್ತೊಂದೆಡೆ, ರಾಜ್ಯದ ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸುವ ಹಾಗೂ ಜಿಲ್ಲಾ ಮಟ್ಟದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಮತ್ತು ಪ್ರಮುಖವಾಗಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಹತ್ವದ ಕ್ರಮ ಕೈಗೊಂಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.