ಬೆಂಗಳೂರು, ಜನವರಿ 23: ಬಿಗ್‌ಬಾಸ್ ಮಾಜಿ ಸ್ಪರ್ಧಿ ಉಗ್ರಂ ಮಂಜು ಅವರು ಸಂಧ್ಯಾ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಧರ್ಮಸ್ಥಳದಲ್ಲಿ ಇಂದು ಕುಟುಂಬಸ್ಥರ ಸಮ್ಮುಖದಲ್ಲಿ ಉಗ್ರಂ ಮಂಜು-ಸಂಧ್ಯಾ ಸರಳವಾಗಿ ಮದುವೆಯಾಗಿದ್ದಾರೆ.
ಇತ್ತೀಚೆಗೆ ಜನವರಿ 21ರಂದು ಮಂಜು ಅವರ ಮನೆಯಲ್ಲಿ ಅರಿಶಿಣ ಹಾಗೂ ಮೆಹಂದಿ ಶಾಸ್ತ್ರಗಳು ನಡೆದಿದ್ದವು. ಮಂಜು ಅವರ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದ್ದು, ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಸಲು ನಿರ್ಧರಿಸಿದ್ದಾರೆ.