2026-05-21 09:46:13

ಯುಪಿಯಲ್ಲಿ ಇನ್ನುಮುಂದೆ ವಿಶ್ವವಿದ್ಯಾಲಯ, ಕಾಲೇಜುಗಳಲ್ಲೂ ಸಮವಸ್ತ್ರ ಕಡ್ಡಾಯ;ರಾಜ್ಯಪಾಲರ ಸೂಚನೆ| Speed News Kannada

ಯುಪಿಯಲ್ಲಿ ಇನ್ನುಮುಂದೆ ವಿಶ್ವವಿದ್ಯಾಲಯ, ಕಾಲೇಜುಗಳಲ್ಲೂ ಸಮವಸ್ತ್ರ ಕಡ್ಡಾಯ;ರಾಜ್ಯಪಾಲರ ಸೂಚನೆ| Speed News Kannada

ಲಖನೌ: ಉತ್ತರ ಪ್ರದೇಶದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಇದುವರೆಗೆ ಶಾಲೆಗಳಲ್ಲಿ ಮಾತ್ರ ಈ ನಿಯಮ ಜಾರಿಯಲ್ಲಿತ್ತು. ವಿಶ್ವವಿದ್ಯಾಲಯ ಮತ್ತು ಕಾಲೇಜು ವಿದ್ಯಾರ್ಥಿಗಳು ಸಮವಸ್ತ್ರ ಧರಿಸಬೇಕು ಎಂಬ ನಿಯಮ ದೇಶದಲ್ಲಿ ಇರಲಿಲ್ಲ. ಆದರೆ, ಈಗ ರಾಜ್ಯಾದ್ಯಂತ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಅನ್ವಯವಾಗುವಂತೆ, ಸಮವಸ್ತ್ರ ವ್ಯವಸ್ಥೆಯನ್ನು ಜಾರಿಗೆ ತರಲು ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ನಿರ್ದೇಶನ ನೀಡಿದ್ದಾರೆ.

ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ, ಕುಲಪತಿಗಳು ಸಮವಸ್ತ್ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸಿದ್ದಾರೆ. ಶಾಲೆಗಳಲ್ಲಿ ಇರುವಂತೆ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲೂ ಸಮವಸ್ತ್ರ ವ್ಯವಸ್ಥೆಯನ್ನು ಪರಿಚಯಿಸುವುದರಿಂದ ವಿದ್ಯಾರ್ಥಿಗಳಲ್ಲಿ ತಾರತಮ್ಯ ಅಥವಾ ಸಾಮಾಜಿಕ ಭಿನ್ನತೆಗಳು ಕಡಿಮೆಯಾಗುತ್ತವೆ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟಿದ್ದಾರೆ.

ಮೂಮದುವರೆದು ರಾಜ್ಯಪಾಲರು, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಉದ್ಯೋಗ ಆಧಾರಿತ ಶಿಕ್ಷಣ ಪರಿಚಯಿಸಬೇಕು. ವಿದ್ಯಾರ್ಥಿಗಳು ಸ್ವಯಂ ಉದ್ಯೋಗ ಮತ್ತು ಉದ್ಯೋಗಗಳನ್ನು ಪಡೆಯಲು ಸಹಕಾರಿಯಾಗುವ ಬ್ಯೂಟಿಷಿಯನ್ ತರಬೇತಿ, ಮೆಹೆಂದಿ, ಬಿಂದಿ ತಯಾರಿಕೆ, ಲೆಕ್ಕಪತ್ರ ನಿರ್ವಹಣೆ ಮತ್ತು ರಾಗಿ ಆಧಾರಿತ ಆಹಾರ ತಯಾರಿಕೆಯಂತಹ ಕೋರ್ಸ್‌ಗಳನ್ನು ಪರಿಚಯಿಸಲು ಅವರು ಸೂಚಿಸಿದ್ದಾರೆ.

ವಿಶ್ವವಿದ್ಯಾಲಯಗಳು ಹೊಸ ವೃತ್ತಿಪರ ಕೋರ್ಸ್‌ಗಳನ್ನು ಪ್ರಾರಂಭಿಸುವುದರಿಂದ ಮಹಿಳೆಯರು ಸ್ವಾವಲಂಬಿಗಳಾಗಲು ಸಹಾಯವಾಗಲಿದೆ ಎಂದೂ ಹೇಳಿದ್ದಾರೆ.


 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.