2026-06-08 01:26:46

Union Minister H.D. Kumaraswamy new bombshell on politics | ರಾಜಕೀಯ ಕುರಿತು ಕೇಂದ್ರ ಸಚಿವ H.D.ಕುಮಾರಸ್ವಾಮಿ ಹೊಸ ಬಾಂಬ್‌ | Speed news kannada

Union Minister H.D. Kumaraswamy new bombshell on politics | ರಾಜಕೀಯ ಕುರಿತು ಕೇಂದ್ರ ಸಚಿವ H.D.ಕುಮಾರಸ್ವಾಮಿ ಹೊಸ ಬಾಂಬ್‌ | Speed news kannada

ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇದರ ಮಧ್ಯೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹೌದು…ಟಿಕೆಟ್ ವಿಚಾರವಾಗಿ ಶುರುವಾದ ಅಸಮಧಾನ ಇದೀಗ ನಾಯಕರ ತಲೆದಂಡದವರೆಗೂ ಬಂದು ನಿಂತಿದೆ. ಅಷ್ಟೇ ಅಲ್ಲದೇ ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶದ ಬಗ್ಗೆಯೂ ಕಾಂಗ್ರೆಸ್​​ನಲ್ಲಿ ಆತಂಕ ಮೂಡಿಸಿದೆ. ಇದರ ಮಧ್ಯೆ ಇದೀಗ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ನವದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಕರ್ನಾಟದಲ್ಲಿ ಏನೇನೋ ರಾಜಕೀಯ ಬೆಳವಣಿಗೆಗಳು ಆಗುತ್ತಿವೆ. ಇನ್ನೂ ಮೇ5ರ ನಂತರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೀವೇ ನೋಡಿ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.