2026-03-07 06:27:39

Union Minister welcomes Reduction | ಭಾರತೀಯ ಉತ್ಪನ್ನಗಳ ಮೇಲಿನ ಆಮದು ಸುಂಕ ಶೇ.18ಕ್ಕೆ ಇಳಿಕೆ: ಕೇಂದ್ರ ಸಚಿವರ ಸ್ವಾಗತ | Speed News Kannada

Union Minister welcomes Reduction | ಭಾರತೀಯ ಉತ್ಪನ್ನಗಳ ಮೇಲಿನ ಆಮದು ಸುಂಕ ಶೇ.18ಕ್ಕೆ ಇಳಿಕೆ: ಕೇಂದ್ರ ಸಚಿವರ ಸ್ವಾಗತ | Speed News Kannada

ನವದೆಹಲಿ: ಭಾರತೀಯ ವಸ್ತುಗಳ ಮೇಲಿನ ಆಮದು ಸುಂಕವನ್ನು ಶೇ.50 ರಿಂದ ಶೇ.18ಕ್ಕೆ ಇಳಿಸಿರುವುದರಿಂದ ಭಾರತೀಯ ಉತ್ಪನ್ನಗಳಿಗೆ ಪ್ರೋತ್ಸಾಹ ಸಿಗಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅಭಿಪ್ರಾಯಪಟ್ಟಿದ್ದಾರೆ. 
ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅಮೆರಿಕದ ಕ್ರಮವನ್ನು ಸ್ವಾಗತಿಸಿರುವ ಅವರು, ಭಾರತದಲ್ಲಿ ತಯಾರಿಸುವ ಉತ್ಪನ್ನಗಳಿಗೆ ಇದು ಶುಭ ಸುದ್ದಿ. ಈಗ ಆಮದು ಸುಂಕ ಶೇ.50 ರಿಂದ ಶೇ.18ಕ್ಕೆ ಇಳಿದಿದೆ. ಇದಕ್ಕಾಗಿ ಪ್ರಧಾನಿ ಮೋದಿ ಅವರನ್ನು ಅಭಿನಂದಿಸುತ್ತೇನೆ ಮತ್ತು ಅವರ ನಾಯಕತ್ವಕ್ಕೆ ಧನ್ಯವಾದಗಳು. ಜಗತ್ತಿನ ಎರಡು ದೊಡ್ಡ ಪ್ರಜಾಪ್ರಭುತ್ವಗಳ ನಾಗರೀಕರಿಗೆ  ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.
ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್‌ ಗೋಯಲ್‌ ಪ್ರತಿಕ್ರಿಯಿಸಿ, ಭಾರತ-ಅಮೆರಿಕ ವ್ಯಾಪಾರ ಒಪ್ಪಂದದಿಂದ ದೇಶೀಯ ರೈತರು, ಎಂಎಸ್‌‍ಎಂಇಗಳು, ಉದ್ಯಮಿಗಳು ಮತ್ತು ಕೌಶಲ್ಯಪೂರ್ಣ ಕಾರ್ಮಿಕರಿಗೆ ಭಾರಿ ಅವಕಾಶಗಳು ತೆರೆದುಕೊಳ್ಳಲಿವೆ. ಮೇಕ್‌ ಇನ್‌ ಇಂಡಿಯಾ ಉಪಕ್ರಮವನ್ನು ಉತ್ತೇಜಿಸುತ್ತದೆ ಎಂದು ಹೇಳಿದ್ದಾರೆ.
ಈ ನಿರ್ಧಾರದಿಂದ ಅಮೆರಿಕದಿಂದ ತಂತ್ರಜ್ಞಾನವನ್ನು ಪಡೆಯಲು ಭಾರತಕ್ಕೆ ಸಾಧ್ಯವಾಗುತ್ತದೆ. ಭಾರತ ಮತ್ತು ಅಮೆರಿಕ ಎರಡೂ ನೈಸರ್ಗಿಕ ಮಿತ್ರರಾಷ್ಟ್ರಗಳಾಗಿದ್ದು, ಸಾಕಷ್ಟು ಪ್ರಯೋಜನವಾಗಲಿದೆ.  ಭಾರತ ಮತ್ತು ಅಮೆರಿಕ ನಡುವಿನ ಉಜ್ವಲ ಭವಿಷ್ಯಕ್ಕೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.
ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಅವರು ಈ ಒಪ್ಪಂದ ಎರಡೂ ದೇಶಗಳ ಆರ್ಥಿಕತೆಯಲ್ಲಿ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ದೇಶದ ಮೇಕ್‌ ಇನ್‌ ಇಂಡಿಯಾ ಪ್ರಯತ್ನಗಳನ್ನು ಬಲಪಡಿಸುತ್ತದೆ ಎಂದು ಹೇಳಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.