2026-03-07 06:32:40

Unresolved Crisis Will Parliament Be Held Today? | ಬಗೆಹರಿಯದ ಬಿಕ್ಕಟ್ಟು ಸಂಸತ್‌ ಕಲಾಪ ಇಂದು ನಡೆಯಲಿದೆಯೇ? | Speed News Kannada

Unresolved Crisis Will Parliament Be Held Today? | ಬಗೆಹರಿಯದ ಬಿಕ್ಕಟ್ಟು ಸಂಸತ್‌ ಕಲಾಪ ಇಂದು ನಡೆಯಲಿದೆಯೇ? | Speed News Kannada

ನವದೆಹಲಿ: ಬಜೆಟ್ ಮೇಲಿನ ಚರ್ಚೆಗೂ ಮುನ್ನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮಾತನಾಡಲು ಅವಕಾಶ ನೀಡಬೇಕು ಎಂದು ಪ್ರತಿಪಕ್ಷಗಳು ತಮ್ಮ ಪಟ್ಟು ಸಡಿಲಿಸಿಲ್ಲ. ಹಾಗೆಯೇ ಸರ್ಕಾರವೂ ವಿಪಕ್ಷಗಳ ಬೇಡಿಕೆಗೆ ಮಣಿಯಲಿಲ್ಲ. ಇದರಿಂದ ಆರನೇ ದಿನವಾದ ಸೋಮವಾರವೂ ಯಾವುದೇ ಕಲಾಪ ನಡೆಯಲಿಲ್ಲ. 
ಇನ್ನು ರಾಜ್ಯಸಭೆಯಲ್ಲೂ ಪರಿಸ್ಥಿತಿ ಭೀನ್ನವಾಗಿರಲಿಲ್ಲ.  ಇದೇ ವಿಚಾರ ಪ್ರಸ್ತಾಪಿಸಿದ ವಿರೋಧ ಪಕ್ಷಗಳ ಸದಸ್ಯರು ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದರು ಆದರೆ ಸಭಾಪತಿ ಅವಕಾಶ ನೀಡದ ಕಾರಣ ಸಭಾತ್ಯಾಗ ಮಾಡಿದರು.
ಸದನದಲ್ಲಿ ಮಾತನಾಡಲು ರಾಹುಲ್ ಗಾಂಧಿ ಅವರಿಗೆ ಅವಕಾಶ ನಿರಾಕರಿಸಿದ ಬೆನ್ನಲ್ಲೇ ಪ್ರತಿಪಕ್ಷಗಳು ಸ್ಪೀಕರ್‌ ಓಂ ಬಿರ್ಲಾ ಅವರನ್ನು  ಪದಚ್ಯುತಗೊಳಿಸಬೇಕು ಎಂದು ಕೋರಿ ನಿರ್ಣಯ ಮಂಡಿಸಲು ಸಿದ್ದತೆ ನಡೆಸಿದ್ದಾರೆ.  
 ಸೇನೆಯ ಮಾಜಿ ಮುಖ್ಯಸ್ಥ ಜನರಲ್ ನರವಣೆ ಅವರ  ಅಪ್ರಕಟಿತ ಪುಸ್ತದಲ್ಲಿ ಪ್ರಸ್ತಾಪಿಸಲಾಗಿರುವ ವಿಷಯಗಳನ್ನು ಪ್ರಸ್ತಾಪಿಸಲು ತಮಗೆ ಅವಕಾಶ ನೀಡಲು ಒಪ್ಪಂದ ಆಗಿದೆ ಎಂದು  ಲೋಕಸಭೆಯಲ್ಲಿ ರಾಹುಲ್ ಗಾಂಧಿ ಪ್ರತಿಪಾದಿಸಿದ್ದರು. ಆದರೆ ಇಂತಹ ಯಾವುದೇ ಒಪ್ಪಂದ ಆಗಿಲ್ಲ ಎಂದು ಆಡಳಿತಾರೂಢ ಬಿಜೆಪಿ ತಿಳಿಸಿದೆ. ಇಂದು ಸದನ ಸರಾಗವಾಗಿ ನಡೆಯಲಿದೆಯೇ ಎಂದು ಕಾದು ನೋಡಬೇಕಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.