2026-04-23 06:48:04

US attack on Iran nuclear facilities|ಇರಾನ್‌ನ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕ ದಾಳಿ |Speed News Kannada

US attack on Iran nuclear facilities|ಇರಾನ್‌ನ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕ ದಾಳಿ |Speed News Kannada

ಮಧ್ಯಪ್ರಾಚ್ಯದಲ್ಲಿ ಯುದ್ಧ ಶುರುವಾಗಿ ಇಂದಿಗೆ 37 ದಿನಕ್ಕೆ ಕಾಲಿಟ್ಟಿದೆ. ಇರಾನ್‌ ಅಮೆರಿಕದ ಯುದ್ಧ ವಿಮಾನ ಹೊಡೆದುಹಾಕಿದ್ದಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್‌ ಕೆಂಡವಾಗಿದ್ದು, ಇಆರನ್‌ ಮೇಲೆ ರಣಭೀಕರ ದಾಳಿ ಮಾಡಲು ಅಮೆರಿಕ ಪ್ಲ್ಯಾನ್‌ ನಡೆಸುತ್ತಿದೆ.  ದಕ್ಷಿಣ ಇರಾನ್‌ನ ಬುಶೆಹ್ರ್ ಪರಮಾಣು ವಿದ್ಯುತ್ ಸ್ಥಾವರದ ಬಳಿ ಶನಿವಾರ ಅಮೆರಿಕ-ಇಸ್ರೇಲ್ ದಾಳಿ ನಡೆಸಿದೆ. ಒಂದು ತಿಂಗಳ ಹಿಂದೆ ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ನಡೆಸಿ ಮಾಜಿ ಸುಪ್ರೀಂ ನಾಯಕ ಅಲಿ ಖಮೇನಿಯನ್ನು ಹತ್ಯೆ ಮಾಡಿತ್ತು. ಪರಿಣಾಮ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ಏರ್ಪಟ್ಟಿತು. ಯುದ್ಧ ಪಶ್ಚಿಮ ಏಷ್ಯಾದಾದ್ಯಂತ ಹರಡಿದ್ದು, ಜಾಗತಿಕ ಆರ್ಥಿಕತೆ ಮತ್ತು ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರಿದೆ. ಇನ್ನೂ ಇರಾನ್‌ ಸ್ಥಾವರವನ್ನ 4 ಬಾರಿ ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ಮಾಹಿತಿ ತಿಳಿಸಿದೆ

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.