ಮಧ್ಯಪ್ರಾಚ್ಯದಲ್ಲಿ ಯುದ್ಧ ಶುರುವಾಗಿ ಇಂದಿಗೆ 37 ದಿನಕ್ಕೆ ಕಾಲಿಟ್ಟಿದೆ. ಇರಾನ್ ಅಮೆರಿಕದ ಯುದ್ಧ ವಿಮಾನ ಹೊಡೆದುಹಾಕಿದ್ದಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್ ಕೆಂಡವಾಗಿದ್ದು, ಇಆರನ್ ಮೇಲೆ ರಣಭೀಕರ ದಾಳಿ ಮಾಡಲು ಅಮೆರಿಕ ಪ್ಲ್ಯಾನ್ ನಡೆಸುತ್ತಿದೆ. ದಕ್ಷಿಣ ಇರಾನ್‌ನ ಬುಶೆಹ್ರ್ ಪರಮಾಣು ವಿದ್ಯುತ್ ಸ್ಥಾವರದ ಬಳಿ ಶನಿವಾರ ಅಮೆರಿಕ-ಇಸ್ರೇಲ್ ದಾಳಿ ನಡೆಸಿದೆ. ಒಂದು ತಿಂಗಳ ಹಿಂದೆ ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ನಡೆಸಿ ಮಾಜಿ ಸುಪ್ರೀಂ ನಾಯಕ ಅಲಿ ಖಮೇನಿಯನ್ನು ಹತ್ಯೆ ಮಾಡಿತ್ತು. ಪರಿಣಾಮ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ಏರ್ಪಟ್ಟಿತು. ಯುದ್ಧ ಪಶ್ಚಿಮ ಏಷ್ಯಾದಾದ್ಯಂತ ಹರಡಿದ್ದು, ಜಾಗತಿಕ ಆರ್ಥಿಕತೆ ಮತ್ತು ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರಿದೆ. ಇನ್ನೂ ಇರಾನ್ ಸ್ಥಾವರವನ್ನ 4 ಬಾರಿ ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ಮಾಹಿತಿ ತಿಳಿಸಿದೆ