2026-03-07 05:10:02

US President Trump Does Whatever He Wants | ಅಮೆರಿಕ ಅಧ್ಯಕ್ಷ ಟ್ರಂಪ್ ತಮಗೆ ಬೇಕಾದ್ದನ್ನೇ ಮಾಡುತ್ತಾರೆ: ಮೋಹನ್‌ ದಾಸ್‌ ಪೈ ಅಭಿಪ್ರಾಯ | Speed News Kannada

US President Trump Does Whatever He Wants | ಅಮೆರಿಕ ಅಧ್ಯಕ್ಷ ಟ್ರಂಪ್ ತಮಗೆ ಬೇಕಾದ್ದನ್ನೇ ಮಾಡುತ್ತಾರೆ: ಮೋಹನ್‌ ದಾಸ್‌ ಪೈ ಅಭಿಪ್ರಾಯ | Speed News Kannada

ಬೆಂಗಳೂರು: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಂದು ರೀತಿಯ ವಿಶಿಷ್ಟ ವ್ಯಕ್ತಿ. ಅವರಿಗೆ ಯಾರ ಬಗ್ಗೆಯೂ ಕಾಳಜಿ ಇಲ್ಲ. ಅವರಿಗೆ ಏನು ಬೇಕೋ ಅದನ್ನೇ ಮಾಡುತ್ತಾರೆ.  ಎಂದು ಕರ್ನಾಟಕದ ಉದ್ಯಮಿ ಮೋಹನ್ ದಾಸ್ ಪೈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭಾರತ ಮತ್ತು ಅಮೆರಿಕ ನಡುವಿನ ವಾಣಿಜ್ಯ ಒಪ್ಪಂದ ಕುರಿತು ಸುದ್ದಿಸಂಸ್ತೆಯೊಂದಕ್ಕೆ ಸಂದರ್ಶನ ನೀಡಿರುವ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವರು ಸುಂಕಗಳನ್ನು ಹೆಚ್ಚಿಸುತ್ತಾರೆ. ಯಾರೊಬ್ಬರೂ ಅವರೊಂದಿಗೆ ಹೋರಾಡಲು ಸಾಧ್ಯವಿಲ್ಲ. ನೀವು ರಷ್ಯಾದ ತೈಲವನ್ನು ಖರೀದಿಸುತ್ತಿಲ್ಲವಾದ್ದರಿಂದ ನಾನು ಸುಂಕವನ್ನು ಶೇ.18 ಕ್ಕೆ ಇಳಿಸುತ್ತಿದ್ದೇನೆ ಎಂದು ಟ್ರಂಪ್ ಸ್ಪಷ್ಟವಾಗಿ ಹೇಳಿದ್ದಾರೆ. 
ಅವರು ಹೇಳುವುದನ್ನು ನಾವು ಅನುಕೂಲಕರ ಒಪ್ಪಂದ ಎಂದು ಅಂದುಕೊಂಡಿದ್ದೇವೆ. ಅಮೆರಿಕದ ಜತೆ ವ್ಯಾಪಾರ ನಡೆಸಿ ಚೀನಾ ದೈತ್ಯ ಶಕ್ತಿಯಾಗಿ ಹೊರಹೊಮ್ಮಿದೆ. ಭಾರತವೂ  ಬುದ್ಧಿವಂತ ದೇಶವಾಗಿ ಅಮೆರಿಕಕ್ಕೆ ಹೆಚ್ಚು ರಫ್ತು ಮಾಡಬೇಕು ಮತ್ತು ಅಮೆರಿಕದೊಂದಿಗೆ ಹೆಚ್ಚು ವ್ಯವಹಾರ ಮಾಡಬೇಕು ಎಂದು ಹೇಳಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.