2026-06-08 01:30:29

Vande Bharat Sleeper coming to Bengaluru-Pune | ಬೆಂಗಳೂರು-ಪುಣೆಗೆ ಬರುತ್ತಿದೆ ವಂದೇ ಭಾರತ್ ಸ್ಲೀಪರ್ | Speed news kannada

Vande Bharat Sleeper coming to Bengaluru-Pune | ಬೆಂಗಳೂರು-ಪುಣೆಗೆ ಬರುತ್ತಿದೆ ವಂದೇ ಭಾರತ್ ಸ್ಲೀಪರ್ | Speed news kannada

ದೇಶದ ರೈಲ್ವೆ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲುಗಲ್ಲು ಸಾಧನೆಯಾಗುತ್ತಿದ್ದು, ಬೆಂಗಳೂರು ಹಾಗೂ ಪುಣೆ ನಡುವಿನ ವಂದೇ ಭಾರತ್‌ ಓಡಾಟದ ಕನಸು ಇಂದು ಪೂರ್ಣಗೊಂಡಿದೆ. ವೇಗ, ಸುಲಭತೆ ಮತ್ತು ಆಧುನಿಕ ತಂತ್ರಜ್ಞಾನಕ್ಕಾಗಿ ಪ್ರಸಿದ್ಧವಾಗಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ಇದೀಗ ಸ್ಲೀಪರ್ ಆವೃತ್ತಿಯಲ್ಲಿ ಬೆಂಗಳೂರಿಗೆ ಪ್ರವೇಶಿಸಲು ಸಜ್ಜಾಗಿದೆ. ಪ್ರಯಾಣಿಕರ ಅನುಭವವನ್ನು ಮತ್ತಷ್ಟು ಸುಧಾರಿಸಲು ಭಾರತೀಯ ರೈಲ್ವೆ ಮಹತ್ವದ ಹೆಜ್ಜೆ ಇಟ್ಟಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಸ್ಲೀಪರ್ ಆವೃತ್ತಿ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಂಚರಿಸಲು ಆರಂಭವಾಗಲಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಏಪ್ರಿಲ್ 5, 2026 ರಂದು ಈ ನೂತನ ಮಾರ್ಗಕ್ಕೆ ಅಧಿಕೃತ ಅನುಮೋದನೆ ನೀಡಿದ್ದಾರೆ. ಇದರೊಂದಿಗೆ, ದೇಶದಲ್ಲಿ ಎರಡನೇ ವಂದೇ ಭಾರತ್ ಸ್ಲೀಪರ್ ಸೇವೆ ಪ್ರಾರಂಭವಾಗಲಿದೆ ಎಂಬುದು ವಿಶೇಷ. ಈ ಹೊಸ ಸ್ಲೀಪರ್ ಸೇವೆ ಪ್ರಯಾಣಿಕರಿಗೆ ಹೆಚ್ಚು ಆರಾಮದಾಯಕ ಮತ್ತು ದೀರ್ಘ ದೂರದ ಪ್ರಯಾಣಕ್ಕೆ ಅನುಕೂಲಕರವಾಗಲಿದೆ. ಪ್ರಸ್ತುತ ಬೆಂಗಳೂರು ಮತ್ತು ಪುಣೆ ನಡುವೆ ಸಂಚರಿಸುವ ಉದ್ಯನ್ ಎಕ್ಸ್‌ಪ್ರೆಸ್ 18 ಗಂಟೆ ಹಾಗೂ ಕೊಯಮತ್ತೂರು ಎಕ್ಸ್‌ಪ್ರೆಸ್ ಸುಮಾರು 19 ಗಂಟೆ ಸಮಯ ತೆಗೆದುಕೊಳ್ಳುತ್ತವೆ. ಆದರೆ, ಹೊಸ ವಂದೇ ಭಾರತ್ ಸ್ಲೀಪರ್ ರೈಲು ಈ ಸಮಯವನ್ನು 13 ಗಂಟೆಗೆ ಇಳಿಸಲಿದೆ. ಆಧುನಿಕ ಸೌಲಭ್ಯಗಳು, ಉತ್ತಮ ಸುರಕ್ಷತಾ ವ್ಯವಸ್ಥೆಗಳು ಮತ್ತು ವೇಗದ ಸಂಚಾರ ಈ ರೈಲಿನ ಪ್ರಮುಖ ಆಕರ್ಷಣೆಗಳಾಗಿವೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.