2026-06-08 03:52:33

vd satishan new chief minister of keralam| ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಆಯ್ಕೆ| Speed News Kannada

vd satishan new chief minister of keralam| ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಆಯ್ಕೆ| Speed News Kannada

ನವದೆಹಲಿ: ಕೇರಳಂ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್‌ ಆಯ್ಕೆಯಾಗಿದ್ದಾರೆ. ಇಂದು ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸತೀಶನ್‌ ಆವರ ಆಯ್ಕೆಯನ್ನು ಪ್ರಕಟಿಸಲಾಯಿತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೀಪ್‌ ದಾಶ್‌ ಮುನ್ಷಿ ಅವರು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸತೀಶನ್‌ ಅವರ ಆಯ್ಕೆಯನ್ನು ಪ್ರಕಟಿಸಿದರು.

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್  ಸ್ಷಷ್ಟ ಬಹುಮತ ಪಡೆದಿದ್ದರೂ ಸಿಎಂ ಆಯ್ಕೆ ಕಗ್ಗಂಟಾಗಿ ಪರಿಣಮಿಸಿತ್ತು. ಮುಖ್ಯಮಂತ್ರಿ ಹುದ್ದೆ ರೇಸ್‌ ನಲ್ಲಿ  ಪಕ್ಷದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌, ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್‌  ಹಾಗೂ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಅವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ಸತೀಶನ್‌ ಆಯ್ಕೆಗೆ ಯುಡಿಎಫ್‌ ಮಿತ್ರಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಒಲವು ವ್ಯಕ್ತಪಡಿಸಿತ್ತು.

ಅಂತಿಮ ನಿರ್ಧಾರ ಕೈಗೊಳ್ಳಲು ಭಾರೀ ಕಸರತ್ತು ನಡೆಸಿದ ಹೈಕಮಾಂಡ್‌ ಸ್ಥಳೀಯ ಮುಖಂಡರ ಅಭಿಪ್ರಾಯಗಳಿಗೆ ಮನ್ನಣೆ ನೀಡಿ ವಿ.ಡಿ. ಸತೀಶನ್ ಅವರ ಆಯ್ಕೆಯನ್ನು ಅಂತಿಮಗೊಳಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.