2026-03-07 12:55:43

Vemagal Helicopter Assembly Plant to be inaugurated today | ವೇಮಗಲ್‌ ಹೆಲಿಕಾಪ್ಟರ್‌ ಜೋಡಣಾ ಘಟಕಕ್ಕೆ ಇಂದು ಚಾಲನೆ ಸಚಿವ ರಾಜನಾಥ್‌ ಸಿಂಗ್‌ ಭಾಗಿ | Speed News Kannada

Vemagal Helicopter Assembly Plant to be inaugurated today | ವೇಮಗಲ್‌ ಹೆಲಿಕಾಪ್ಟರ್‌ ಜೋಡಣಾ ಘಟಕಕ್ಕೆ ಇಂದು ಚಾಲನೆ ಸಚಿವ ರಾಜನಾಥ್‌ ಸಿಂಗ್‌ ಭಾಗಿ | Speed News Kannada

ಕೋಲಾರ: ಕೋಲಾರ ತಾಲ್ಲೂಕಿನ ವೇಮಗಲ್‌ ಕೈಗಾರಿಕಾ ಪ್ರದೇಶದಲ್ಲಿ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್‌ (ಟಿಎಎಸ್‌ಎಲ್‌) ನಿರ್ಮಿಸಿರುವ ಏರ್‌ಬಸ್‌ ಎಚ್‌ 125 ಲಘು ಹೆಲಿಕಾಪ್ಟರ್‌ ಅಂತಿಮ ಜೋಡಣಾ ಘಟಕಕ್ಕೆ ಇಂದು ಸಂಜೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಚಾಲನೆ ನೀಡಲಿದ್ದಾರೆ.
ಮುಂಬೈನಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್‌ ಅಧ್ಯಕ್ಷ ಇಮಾನ್ಯುಯೆಲ್‌ ಮ್ಯಾಕ್ರಾನ್‌ ಅವರು ‌ವರ್ಚುವಲ್‌ ವೇದಿಕೆ ಮೂಲಕ ಉದ್ಘಾಟನೆ ನೆರವೇರಿಸಲಿದ್ದಾರೆ.
ವೇಮಗಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮತ್ತು ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರಿನ್‌ ವಾಟ್ರಿನ್, ರಕ್ಷಣಾ ಕಾರ್ಯದರ್ಶಿ ರಾಜೇಶ್‌ ಕುಮಾರ್‌ ಸಿಂಗ್‌ ಭಾಗವಹಿಸಲಿದ್ದಾರೆ.  
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಭಾರತ ಮತ್ತು ಫ್ರಾನ್ಸ್ ದೇಶಗಳ ನಡುವಿನ ರಕ್ಷಣಾ ಒಪ್ಪಂದ ಕುರಿತು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯಲಿದೆ.
ಖಾಸಗಿ ವಲಯದಲ್ಲಿ ದೇಶದ ಮೊದಲ ಹೆಲಿಕಾಪ್ಟರ್‌ ತಯಾರಿಕಾ ಘಟಕ ಇದಾಗಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಉದ್ಯೋಗಗಳು ಸೃಷ್ಟಿಯಾಗುವ ಸಾಧ್ಯತೆಗಳಿವೆ.  ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಎಂ.ಆರ್‌.ರವಿ, ಜಿಲ್ಲಾ ‍ಪೊಲೀಸ್‌ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್‌ ಸಿದ್ಧತೆ ಪರಿಶೀಲಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.