2026-05-02 11:52:36

Veteran actor Sasikumar visits Kapu Marigudi temple|ಕಾಪು ಮಾರಿಗುಡಿ ದೇವಸ್ಥಾನಕ್ಕೆ ಹಿರಿಯ ನಟ ಶಶಿಕುಮಾರ್ ಭೇಟಿ|Speed News Kannada

Veteran actor Sasikumar visits Kapu Marigudi temple|ಕಾಪು ಮಾರಿಗುಡಿ ದೇವಸ್ಥಾನಕ್ಕೆ ಹಿರಿಯ ನಟ ಶಶಿಕುಮಾರ್ ಭೇಟಿ|Speed News Kannada

ಕನ್ನಡ ಚಲನಚಿತ್ರದ ಹಿರಿಯ ನಟ ಶಶಿಕುಮಾರ್ ಮೇ 1ರಂದು ಉಚ್ಚಂಗಿ ಸಹಿತ ಮಾರಿಯಮ್ಮನ ಕ್ಷೇತ್ರವಾದ ಕಾಪುವಿನ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.ಈ ವೇಳೆ ಅವರು ಮಾರಿಯಮ್ಮನ ಸ್ವರ್ಣ ಗದ್ದುಗೆ ಹಾಗೂ ವಿವಿಧ ಕಲಾತ್ಮಕ ಕೆತ್ತನೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಎಲ್ಲ ಕಲಾಕೃತಿಗಳನ್ನು “ಕಾಪುವಿನ ಅಮ್ಮನ ಆಶೀರ್ವಾದದಿಂದ ನಿರ್ಮಿಸಲಾಗಿದೆ” ಎಂದು ಹೇಳಿದರು.ಅವಕಾಶ ಸಿಕ್ಕಾಗ ಮತ್ತೆ ಮತ್ತೆ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ ಎಂದು ನಟ ಶಶಿಕುಮಾರ್ ತಿಳಿಸಿದರು. ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯವರು ಅವರನ್ನು ಗೌರವಿಸಿ, ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.