2026-04-23 09:36:26

Victory for the struggle of Chamarajanagar oxygen tragedy victims | ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ | Speed news kannada

Victory for the struggle of Chamarajanagar oxygen tragedy victims | ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ | Speed news kannada

ಕೊರೊನಾ ವೇಳೆ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಗಳ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. 21 ಮಂದಿಗೆ ಸರ್ಕಾರಿ ಕೆಲಸ ಘೋಷಣೆ ಮಾಡಿದ್ದು, ಮಂಗಳವಾರ (ಏ.21) ಸಿಎಂ ಸಿದ್ದರಾಮಯ್ಯ ಅವರು ನೇಮಕಾತಿ ಆದೇಶ ಪತ್ರ ವಿತರಿಸಲಿದ್ದಾರೆ. ಹೌದು. ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕೊರೊನಾ ಅವಧಿಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ವೇಳೆ 36 ಜನರು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದರು.

ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ಕೊಡುವಂತೆ ಅಂದಿನಿಂದಲೂ ಹೋರಾಟ ಮಾಡಲಾಗುತ್ತಿತ್ತು. ಇದೀಗ ಸಂತ್ರಸ್ತರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಏ.21 ರಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ 21 ಕ್ಕೂ ಹೆಚ್ಚು ಮಂದಿಗೆ ಸರ್ಕಾರಿ ಕೆಲಸದ ಆದೇಶ ಪತ್ರ ವಿತರಿಸಲಿದ್ದಾರೆ.

ಸರ್ಕಾರಿ ಕೆಲಸ ಸಿಗುವ ಸಂತಸದಲ್ಲಿರುವ ದೊಡ್ಡಯ್ಯ ಕುಟುಂಬ ಸಂತಸ ಹಂಚಿಕೊಂಡಿದೆ. ಅಲ್ಲದೇ ಗಂಡನನ್ನು ಕಳೆದುಕೊಂಡು ಜೀವನ ನಡೆಸಲು ಪರದಾಡಿದ್ದು ಮಗನನ್ನು ಓದಿಸಲು ಕಷ್ಟಪಟ್ಟ ಬಗ್ಗೆ ನೆನೆದು ಕಣ್ಣೀರು ಸುರಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.