2026-04-24 02:57:22

Video of woman being harassed in Jaipur goes viral|ಜೈಪುರದಲ್ಲಿ ಮಹಿಳೆಗೆ ಕಿರುಕುಳ ವಿಡಿಯೋ ವೈರಲ್|Speed News Kannada

Video of woman being harassed in Jaipur goes viral|ಜೈಪುರದಲ್ಲಿ ಮಹಿಳೆಗೆ ಕಿರುಕುಳ ವಿಡಿಯೋ ವೈರಲ್|Speed News Kannada

ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಮಹಿಳೆಯ ಸುರಕ್ಷತೆಯನ್ನು ಪ್ರಶ್ನಿಸುವಂತಹ ಘಟನೆ ಒಂದು ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.ಬ್ಯುಸಿ ರಸ್ತೆಯಲ್ಲಿ ಯುವತಿಯೊಬ್ಬರ ಮೇಲೆ ಕೆಲ ದುಷ್ಕರ್ಮಿಗಳು ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಕಾಣಿಸಿಕೊಂಡಿವೆ. ಸಾರ್ವಜನಿಕ ಸ್ಥಳದಲ್ಲೇ ನಡೆದ ಈ ಕಿರುಕುಳದ ಘಟನೆ ಜನರನ್ನು ಆತಂಕಕ್ಕೆ ದೂಡಿದೆ.

ಘಟನೆ ವೇಳೆ ಅಲ್ಲಿದ್ದವರು ಸಹಾಯಕ್ಕೆ ಮುಂದಾಗದಿರುವುದು ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಪ್ರಶ್ನೆಗಳು ಎದ್ದಿವೆ. ಈ ಘಟನೆ ಮಹಿಳೆಯರ ಸುರಕ್ಷತೆ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ.ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.ಇದೇ ವೇಳೆ, ಜೈಪುರದಂತಹ ಪ್ರಮುಖ ನಗರದಲ್ಲೇ ಇಂತಹ ಘಟನೆಗಳು ಹೆಚ್ಚುತ್ತಿರುವುದರಿಂದ ಸಾರ್ವಜನಿಕರು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.