2026-06-08 01:23:45

ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿ ವಯೋಮಿತಿ ಸಡಿಲಿಕೆ | vidhana soudha | Speed news kannada

ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿ ವಯೋಮಿತಿ ಸಡಿಲಿಕೆ | vidhana soudha | Speed news kannada

ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿ ವಯೋಮಿತಿ ಸಡಿಲಿಕೆ

ಬೆಂಗಳೂರು, ಜನವರಿ 23: ಕರ್ನಾಟಕ ಸಚಿವ ಸಂಪುಟವು ರಾಜ್ಯದ ಸಿವಿಲ್ ಸೇವಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ಉದ್ಯೋಗಾಕಾಂಕ್ಷಿಗಳ ವಯೋಮಿತಿ ಸಡಿಲಿಕೆಗೆ ಅನುಮೋದನೆ ನೀಡಿದೆ. ಸರ್ಕಾರದ ಈ ನಿರ್ಧಾರದ ಮೂಲಕ, ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ಹೆಚ್ಚುವರಿ ವಯೋಮಿತಿ ಸೌಲಭ್ಯವನ್ನು ನೀಡಲಾಗಿದೆ.

ಈ ಹಿಂದೆ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳ ವಯೋಮಿತಿ ಇದ್ದು, ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ವರ್ಗದ ಅಭ್ಯರ್ಥಿಗಳಿಗೆ 38 ವರ್ಷಗಳ ಗರಿಷ್ಠ ವಯೋಮಿತಿ ಇತ್ತು. ಹೊಸ ಆದೇಶದ ಪ್ರಕಾರ, ಈ ಎಲ್ಲಾ ವರ್ಗದ ವಯೋಮಿತಿಗಳಿಗೆ ಐದು ವರ್ಷಗಳನ್ನು ಸೇರ್ಪಡೆ ಮಾಡಲಾಗಿದೆ. ಅಂದರೆ, ಸಾಮಾನ್ಯ ವರ್ಗಕ್ಕೆ ಈಗ 40 ವರ್ಷ ಮತ್ತು ಎಸ್‌ಸಿ, ಎಸ್‌ಟಿ ವರ್ಗಕ್ಕೆ 43 ವರ್ಷ ಗರಿಷ್ಠ ವಯೋಮಿತಿ ಆಗಲಿದೆ.

ಈ ವಯೋಮಿತಿ ಸಡಿಲಿಕೆಯು 2027ರ ಡಿಸೆಂಬರ್ 31 ವರೆಗೆ ಚಾಲ್ತಿಯಲ್ಲಿರುತ್ತದೆ. ಈ ಅವಧಿಯೊಳಗೆ ಎಷ್ಟು ಸಿವಿಲ್ ಸೇವಾ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗುತ್ತದೆಯೋ ಅಷ್ಟು ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗಲಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.