ಚೆನ್ನೈ: ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚಿಸಲು ಅಗತ್ಯ ಬಹುಮತವನ್ನು ಪಡೆದುಕೊಂಡಿದೆ. 108 ಸ್ಥಾನಗಳನ್ನು ಗಳಿಸಿರುವ ವಿಜಯ್ ಅವರಿಗೆ ಕಾಂಗ್ರೆಸ್ ತನ್ನ 5 ಶಾಸಕರ ಬೆಂಬಲ ಘೋಷಿಸಿದೆ. ಇಂದು ಸಿಪಿಐ, ಸಿಪಿಎಂ ಮತ್ತು ವಿಸಿಕೆ ಪಕ್ಷಗಳೂ ಬೆಂಬಲ ಘೋಷಿಸಿವೆ. ಸಿಪಿಐ 2, ಸಿಪಿಐ(ಎಂ) 2 ಹಾಗೂ ವಿಸಿಕೆ 2 ಸ್ಥಾನಗಳನ್ನು ಹೊಂದಿವೆ.
ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಟಿವಿಕೆ ಮುಖ್ಯಸ್ಥ ವಿಜಯ್ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಿ ಹಕ್ಕು ಮಂಡಿಸಲಿದ್ದಾರೆ.
ಬೆಂಬಲ ಸೂಚಿಸಿರುವ ಪಕ್ಷಗಳು ಬಾಹ್ಯ ಬೆಂಬಲ ನೀಡಲಿವೆಯೇ ಅಥವಾ ಸರ್ಕಾರದ ಭಾಗವಾಗಲಿವೆಯೇ ಎಂದು ತಿಳಿದು ಬಂದಿಲ್ಲ. ಈ ಮೂಲಕ ತಮಿಳುನಾಡಿನಲ್ಲಿ ಸರ್ಕಾರವನ್ನು ಯಾರು ರಚಿಸುತ್ತಾರೆ ಎಂಬ ಎಲ್ಲ ಗೊಂದಲಗಳಿಗೆ ತೆರೆ ಬಿದ್ದಿದೆ.