2026-06-08 03:50:01

Vijay gets support from 6 more MLAs | ವಿಜಯ್‌ ಗೆ ಸಿಕ್ತು ಇನ್ನೂ 6 ಶಾಸಕರ ಬೆಂಬಲ ಸರ್ಕಾರ ರಚನೆ ಖಚಿತ | Speed News Kannada

Vijay gets support from 6 more MLAs | ವಿಜಯ್‌ ಗೆ ಸಿಕ್ತು ಇನ್ನೂ 6 ಶಾಸಕರ ಬೆಂಬಲ ಸರ್ಕಾರ ರಚನೆ ಖಚಿತ | Speed News Kannada

ಚೆನ್ನೈ: ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಟಿವಿಕೆ ಸರ್ಕಾರ ರಚಿಸಲು ಅಗತ್ಯ ಬಹುಮತವನ್ನು ಪಡೆದುಕೊಂಡಿದೆ. 108 ಸ್ಥಾನಗಳನ್ನು ಗಳಿಸಿರುವ ವಿಜಯ್ ಅವರಿಗೆ ಕಾಂಗ್ರೆಸ್‌ ತನ್ನ 5 ಶಾಸಕರ ಬೆಂಬಲ ಘೋಷಿಸಿದೆ. ಇಂದು ಸಿಪಿಐ, ಸಿಪಿಎಂ ಮತ್ತು ವಿಸಿಕೆ ಪಕ್ಷಗಳೂ ಬೆಂಬಲ ಘೋಷಿಸಿವೆ. ಸಿಪಿಐ 2, ಸಿಪಿಐ(ಎಂ) 2 ಹಾಗೂ ವಿಸಿಕೆ 2 ಸ್ಥಾನಗಳನ್ನು ಹೊಂದಿವೆ.
ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಟಿವಿಕೆ ಮುಖ್ಯಸ್ಥ ವಿಜಯ್‌ ರಾಜ್ಯಪಾಲ ರಾಜೇಂದ್ರ ಅರ್ಲೇಕರ್‌ ಅವರನ್ನು ಭೇಟಿ ಮಾಡಿ ಹಕ್ಕು ಮಂಡಿಸಲಿದ್ದಾರೆ. 
ಬೆಂಬಲ ಸೂಚಿಸಿರುವ ಪಕ್ಷಗಳು ಬಾಹ್ಯ ಬೆಂಬಲ ನೀಡಲಿವೆಯೇ ಅಥವಾ ಸರ್ಕಾರದ ಭಾಗವಾಗಲಿವೆಯೇ ಎಂದು ತಿಳಿದು ಬಂದಿಲ್ಲ. ಈ ಮೂಲಕ ತಮಿಳುನಾಡಿನಲ್ಲಿ ಸರ್ಕಾರವನ್ನು ಯಾರು ರಚಿಸುತ್ತಾರೆ ಎಂಬ ಎಲ್ಲ ಗೊಂದಲಗಳಿಗೆ ತೆರೆ ಬಿದ್ದಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.