ಬಾಸ್ ಸಿನಿಮಾದ ಟೀಸರ್‌ನಿಂದ ಬೃಹತ್ ವಿವಾದ ಸೃಷ್ಟಿಸಿದ್ದ ‘ಬಾಸ್’ ಚಿತ್ರಕ್ಕೆ ಕೋರ್ಟ್ ಕಡೆಯಿಂದ ತಡೆ ನೀಡಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರೇಣುಕಾಸ್ವಾಮಿ ಕೊಲೆ ಕೇಸ್ ನಂತಹ ಬಾಸ್ ಸಿನಿಮಾದಲ್ಲಿ ಚಿತ್ರೀಕರಿಸಲಾಗಿದೆ ಎನ್ನಲಾಗುತ್ತಿದೆ. ಈ ಸಿನಿಮಾದ ಟೀಸರ್ ರಿಲೀಸ್ ಆಗ್ತಿದ್ದಂತೆ ದರ್ಶನ್ ಅಭಿಮಾನಿಗಳು ಒಮ್ಮೆ ಬೆಚ್ಚಿ ಬಿದ್ದಿದ್ದರು. ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೇರಿದಂತೆ ದರ್ಶನ್ ಆಪ್ತರು ವಿರೋಧಿಸಿದ್ದರು. ಈ ಸಿನಿಮಾ ರಿಲೀಸ್‌ಗೆ ತಡೆ ನೀಡಬೇಕು ಅಂತ ಕೋರಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಕೋರ್ಟ್ ಮೆಟ್ಟಿಲೇರಿದ್ದರು. ಬಾಸ್ ಸಿನಿಮಾ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಬೆಂಗಳೂರಿನ 17ನೇ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶೆ ಎಂ. ಅನಿತಾ ಅವರು, ಸಿನಿಮಾಗೆ ತಡೆ ನೀಡಿ ಆದೇಶಿಸಿದ್ದಾರೆ ಅಲ್ಲಿ ಈ ಅರ್ಜಿಯಾ ವಿಚಾರಣೆ ನಡೆದಿದೆ. ಈ ಸಿನಿಮಾದಲ್ಲಿ ದರ್ಶನ್ ಹಾಗೂ ಅವರ ಕುಟುಂಬದ ಖಾಸಗಿ ಜೀವನ, ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು.ಈ ಚಿತ್ರದಲ್ಲಿ ಚಿತ್ರೀಕರಿಸಲಾಗಿದೆ ಎಂದು ದರ್ಶನ್ ಪತ್ನಿ ತಮ್ಮ ಅರ್ಜಿಯಲ್ಲಿ ತಿಳಿಸಿದ್ದರು.
ಪರೋಕ್ಷವಾಗಿ ನಮ್ಮ ಕುಟುಂಬಕ್ಕೆ ಸಂಬಂಧಿಸಿದ ವಿಚಾರಗಳನ್ನು ಚಿತ್ರದಲ್ಲಿ ಪ್ರಸ್ತಾಪಿಸಲಾಗಿದೆ ಅಂತ ವಿಜಯಲಕ್ಷ್ಮಿ ತಮ್ಮ ಅಳಲು ತೋಡಿಕೊಂಡಿದ್ದರು. ಪ್ರಸ್ತುತ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕೋರ್ಟ್‌ನಲ್ಲಿ ಟ್ರಯಲ್ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸಿನಿಮಾ ಬಿಡುಗಡೆಯಾದಲ್ಲಿ ನಮ್ಮ ಕುಟುಂಬದ ಗೌರವಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ ಎಂದು ವಿಜಯಲಕ್ಷ್ಮಿ ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಬಾಸ್ ಸಿನಿಮಾ ರಿಲೀಸ್‌ಗೆ ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ಪ್ರಚಾರ, ಬಿಡುಗಡೆ, ಹಂಚಿಕೆ, ಓಟಿಟಿ ಸ್ಟ್ರೀಮಿಂಗ್, ಮಾಧ್ಯಮಗೋಷ್ಠಿ, ಸಂದರ್ಶನಗಳು, ಪೋಸ್ಟರ್, ಟೀಸರ್ ಸೇರಿದಂತೆ ಯಾವುದೇ ರೀತಿಯ ಪ್ರಚಾರ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ ಎಂದು ಕೋರ್ಟ್ ಸ್ಪಷ್ಟ ಆದೇಶ ಹೊರಡಿಸಿದೆ.
ಮುಂದಿನ ವಿಚಾರಣೆಯವರೆಗೆ ಯಾವುದೇ ಚಟುವಟಿಕೆಗಳನ್ನು ಕೈಗೊಳ್ಳುವಂತಿಲ್ಲ ಎಂದು ನಿರ್ದೇಶಿಸಲಾಗಿದೆ. ಕೋರ್ಟ್ ಈಗಾಗಲೇ ಪ್ರೊಡಕ್ಷನ್ ಕಂಪನಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಸೋಷಿಯಲ್ ಮೀಡಿಯಾ ಕಂಪನಿಗಳು ಹಾಗೂ ಖಾಸಗಿ ಚಾನಲ್‌ಗಳಿಗೆ ಸಮನ್ಸ್ ಮತ್ತು ನೋಟಿಸ್ ಜಾರಿ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ನಿರ್ದೋಷಿ ಎಂದು ತಮ್ಮ ಹಕ್ಕುಗಳನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ವಿಜಯಲಕ್ಷ್ಮಿ ದರ್ಶನ್ ಅವರು ಈ ಕ್ರಮ ಕೈಗೊಂಡಿದ್ದಾರೆ ಎಂದು ಅವರ ವಕೀಲರು ತಿಳಿಸಿದ್ದಾರೆ. ಮುಂದಿನ ವಿಚಾರಣೆಯನ್ನು ಮೇ 2ರಂದು ಮುಂದೂಡಲಾಗಿದೆ ಎನ್ನಲಾಗುತ್ತಿದೆ.