ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್ ಮಾನಸಿಕವಾಗಿ ಕುಗ್ಗಿದ್ದಾರೆ ಎಂಬ ವದಂತಿಗಳಿಗೆ ಅವರ ಪತ್ನಿ ವಿಜಯಲಕ್ಷ್ಮೀ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಮಂಡ್ಯದಲ್ಲಿ ನಡೆದ 'ಹಯಗ್ರೀವ' ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ದರ್ಶನ್ ಜೈಲಿನಲ್ಲಿ ತುಂಬಾ ಚೆನ್ನಾಗಿದ್ದಾರೆ ಮತ್ತು ಮಾನಸಿಕವಾಗಿ ಬಲಿಷ್ಠರಾಗಿದ್ದಾರೆ ಎಂದು ಅಭಿಮಾನಿಗಳಿಗೆ ಸಿಹಿ ಸುದ್ದಿ
‘ಹಯಗ್ರೀವ’ ಟ್ರೇಲರ್ ಲಾಂಚ್ ಈವೆಂಟ್ ಗೆ ವಿಜಯಲಕ್ಷ್ಮೀ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ವಿಜಯಲಕ್ಷ್ಮೀ ಅವರು ದರ್ಶನ್ ಬಗ್ಗೆ ಅಭಿಮಾನಿಗಳಿಗೆ ಅಪ್ ಡೇಟ್ ಕೊಟ್ಟಿದ್ದಾರೆ. ‘ಹಯಗ್ರೀವ ಸಿನಿಮಾದಲ್ಲಿ ನಟಿಸಿರುವ ಧನ್ವೀರ್, ಸಂಜನಾಗೆ ಒಳ್ಳೆದಾಗಲಿ. ಧನ್ವೀರ್ ನಮ್ಮ ಕುಟುಂಬದ ಸದಸ್ಯ. ನಮಗೆ ಪ್ರೀತಿ ತೋರಿಸಿದ ಹಾಗೇ ಧನ್ವೀರ್‌ಗೂ ಪ್ರೀತಿ ತೋರಿಸಿ. ಪೈರಸಿ ಸಪೋರ್ಟ್ ಮಾಡಬೇಡಿ, ಸಿನಿಮಾ ಥಿಯೇಟರಲ್ಲಿ ನೋಡಿ ಎಂಜಾಯ್ ಮಾಡಿ’ ಎಂದು ವಿಜಯಲಕ್ಷ್ಮೀ ಕೋರಿದರು.
ಇಷ್ಟು ಕಷ್ಟದಲ್ಲೂ ‘ಡಿ ಬಾಸ್ ಚೆನ್ನಾಗಿದ್ದಾರೆ ತುಂಬಾ ಸ್ಟ್ರಾಂಗ್ ಆಗಿದ್ದಾರೆ. ಅದಕ್ಕೆಲ್ಲಾ ಕಾರಣ ನೀವು, ನಿಮ್ಮಿಂದ ಅವರು ಚೆನ್ನಾಗಿದ್ದಾರೆ’ ಎಂದು ಹೇಳಿದರು.
ದರ್ಶನ್ ಸ್ಟ್ರಾಂಗ್ ಆಗಿದ್ದಾರೆ ಎಂಬ ವಿಷಯ ಅಭಿಮಾನಿಗಳಿಗೆ ಖುಷಿ ನೀಡಿದೆ. ಹಯಗ್ರೀವ’ ಸಿನಿಮಾ ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬಂದಿದೆ. ನಿರಂತರವಾಗಿ ನಡೆಯೋ ಭೀಕರ ಕೊಲೆಯ ಸುತ್ತ ಸಾಗುವ ಕಥೆಯನ್ನು ಇದು ಹೊಂದಿದೆ. ಫೆಬ್ರವರಿ 27ರಂದು ಸಿನಿಮಾ ತೆರೆಗೆ ಬರುತ್ತಿದೆ.