2026-03-07 02:07:45

Vijayendra | ಗೃಹಲಕ್ಷ್ಮಿ ಹೆಸರಿನಲ್ಲಿ ರೂ2 ಸಾವಿರ ಕೊಟ್ಟು ಹೆಂಡ ಮಾರಿ ರೂ10 ಸಾವಿರ ಕಿತ್ತುಕೊಳ್ಳುವ ಸರಕಾರ ವಿಜಯೇಂದ್ರ ಆರೋಪ | Speed News Kannada

Vijayendra | ಗೃಹಲಕ್ಷ್ಮಿ ಹೆಸರಿನಲ್ಲಿ ರೂ2 ಸಾವಿರ ಕೊಟ್ಟು ಹೆಂಡ ಮಾರಿ ರೂ10 ಸಾವಿರ ಕಿತ್ತುಕೊಳ್ಳುವ ಸರಕಾರ ವಿಜಯೇಂದ್ರ ಆರೋಪ | Speed News Kannada

ಬೆಳಗಾವಿ: ಕಾಂಗ್ರೆಸ್ ಪಕ್ಷವು ಬಡತನ ನಿರ್ಮೂಲನೆ ಮಾಡುವುದಾಗಿ ಹೇಳಿ ಬಡವರನ್ನು ನಿರ್ಮೂಲನೆ ಮಾಡಿದರೇ ಹೊರತು ಬಡವರ ಬಡತನ ನಿರ್ಮೂಲನೆ ಮಾಡಲು ಈ ಪಕ್ಷಕ್ಕೆ ಸಾಧ್ಯವಾಗಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ  ಟೀಕಿಸಿದ್ದಾರೆ.
ಇಂದು ವಿಬಿ ಜಿ ರಾಮ್ ಜಿ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಎರಡೂವರೆ ವರ್ಷದಲ್ಲಿ ಒಂದಾದರೂ ಹೊಸ ಅಭಿವೃದ್ಧಿ ಯೋಜನೆ ನೀಡಲು ಇವರಿಗೆ  ಸಾಧ್ಯವಾಗಲಿಲ್ಲ. ಗೃಹಲಕ್ಷ್ಮಿಯಡಿ 2 ಸಾವಿರ ಕೊಡುವುದಾಗಿ ಹೇಳಿ ಈ ಯೋಜನೆಗೆ ಹಣ ಕ್ರೋಡೀಕರಿಸಲು ಸಾಧ್ಯವಾಗದೇ ರಾಜ್ಯದಲ್ಲಿ ಅಬಕಾರಿ ಇಲಾಖೆಗೆ 40 ಸಾವಿರ ಕೋಟಿ ವ್ಯವಹಾರದ ಗುರಿ ನೀಡಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ 500 ಮೀಟರ್‌ ಗೆ ಒಂದು ಮೆಡಿಕಲ್ ಶಾಪ್ ಸಿಗುತ್ತದೋ ಇಲ್ಲವೋ ಗೊತ್ತಿಲ್ಲ; ಆದರೆ, 500 ಮೀಟರಿಗೆ ಒಂದು ಹೆಂಡದಂಗಡಿ ಸಿಗುತ್ತಿದೆ. ದಿನಸಿ ಅಂಗಡಿಗಳಲ್ಲಿ ಹೆಂಡ ಮಾರಾಟ ಮಾಡುತ್ತಿರುವುದು ಕಾಂಗ್ರೆಸ್ ಸರಕಾರದ ಸಾಧನೆ ಎಂದು ವ್ಯಂಗ್ಯವಾಡಿದ ಅವರು ಗೃಹಲಕ್ಷ್ಮಿಯಡಿ 2 ಸಾವಿರ ರೂ. ಕೊಟ್ಟು ಹೆಂಡ ಮಾರಾಟ ಮಾಡಿ ರೂ.10 ಸಾವಿರ ಕಿತ್ತುಕೊಳ್ಳುವುದೇ ಈ ಸರಕಾರದ ಸಾಧನೆ ಎಂದು ಲೇವಡಿ ಮಾಡಿದರು.
ವಿಕಸಿತ ಭಾರತ ಜಿ ರಾಮ್ ಜಿ ಕಾಯ್ದೆಯನ್ನು ಕೇಂದ್ರ ಸರಕಾರ ಅನುಷ್ಠಾನಕ್ಕೆ ತಂದಿದೆ. ಹಿಂದೆ ಕೂಲಿಗಾಗಿ ಕಾಳು ಎಂದಿತ್ತು. ನಂತರ ಉದ್ಯೋಗ ಖಾತರಿ, ಮನ್‍ರೇಗಾ ಆಗಿತ್ತು. ಇವತ್ತು ಕೇಂದ್ರ ಸರಕಾರ, ನರೇಂದ್ರ ಮೋದಿಜೀ ಅವರು ಅದಕ್ಕೆ ಒಂದು ಹೊಸ ರೂಪ ಕೊಟ್ಟು, ಸಾಕಷ್ಟು ಸುಧಾರಣೆಗಳನ್ನು ತಂದು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಅದನ್ನು ಅನುಷ್ಠಾನಕ್ಕೆ ತಂದಿದ್ದಾರೆ. ಸಹಜವಾಗಿ ಕಾಂಗ್ರೆಸ್ಸಿನವರು ಟೀಕೆ ಮಾಡುವುದಲ್ಲದೇ, ಜಾಹೀರಾತು ಕೊಡುತ್ತಿದ್ದಾರೆ. ಮೊನ್ನೆ ನಡೆದ ಅಧಿವೇಶನದಲ್ಲಿ ವಿಬಿ ಜಿ ರಾಮ್ ಜಿ ವಿರುದ್ಧ ನಿರ್ಣಯವನ್ನೂ ಅನುಮೋದಿಸಿದ್ದಾರೆ ಎಂದು ದೂರಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.