2026-04-25 05:47:46

Vinay Kulkarni files appeal in High Court challenging Sessions Court order | ಸೇಷನ್ಸ್‌ ಕೋರ್ಟ್‌ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ವಿನಯ್‌ ಕುಲಕರ್ಣಿ | Speed news kannada

Vinay Kulkarni files appeal in High Court challenging Sessions Court order | ಸೇಷನ್ಸ್‌ ಕೋರ್ಟ್‌ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ವಿನಯ್‌ ಕುಲಕರ್ಣಿ | Speed news kannada

ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಹೈಕೋರ್ಟ್‌ಗೆ ಮೇಲ್ಮನವಿಯನ್ನ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆ ಹಾಗೂ ಸಕ್ಷಮ ನ್ಯಾಯಾಲಯ ನೀಡಿದ್ದ ಕನ್ವಿಕ್ಷನ್ ಆದೇಶವನ್ನ ಪ್ರಶ್ನಿಸಿ, ಶಿಕ್ಷೆಗೆ ತಡೆಯಾಜ್ಞೆ ಮತ್ತು ಜಾಮೀನು ನೀಡುವಂತೆ ಅವರು ಮನವಿ ಮಾಡಿದ್ದಾರೆ.

ತಮ್ಮ ಶಾಸಕ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳಿರುವ ಕಾರಣ, ಶಿಕ್ಷೆಗೆ ತಕ್ಷಣ ತಡೆಯಾಜ್ಞೆ ನೀಡುವಂತೆ ಕೋರಿದ್ದಾರೆ. ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಮುಂದಿನ ವಾರ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ವಿಚಾರಣೆಯ ವೇಳೆ ಸಿಬಿಐ ವಾದವನ್ನೂ ನ್ಯಾಯಾಲಯ ಆಲಿಸುವ ನಿರೀಕ್ಷೆಯಿದೆ. ಜೀವಾವಧಿ ಶಿಕ್ಷೆ ಆದೇಶವನ್ನು ರದ್ದುಪಡಿಸುವಂತೆ ತಮ್ಮ ಅರ್ಜಿಯಲ್ಲಿ ವಿನಯ್ ಕುಲಕರ್ಣಿ ಕೋರಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.