2026-05-03 05:55:05

Vinay Kulkarni seat of MLA from Dharwad Rural Constituency canceled | ಜೀವಾವಧಿ ಶಿಕ್ಷೆ ಹಿನ್ನೆಲೆ ಧಾರವಾಡ ಗ್ರಾಮೀಣ ಕ್ಷೇತ್ರ ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು | Speed News Kannada

Vinay Kulkarni seat of MLA from Dharwad Rural Constituency canceled | ಜೀವಾವಧಿ ಶಿಕ್ಷೆ ಹಿನ್ನೆಲೆ ಧಾರವಾಡ ಗ್ರಾಮೀಣ ಕ್ಷೇತ್ರ ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು | Speed News Kannada

ಬೆಂಗಳೂರು:  ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಅನರ್ಹಗೊಂಡಿದೆ. ವಿಧಾನಸಭೆ ಕಾರ್ಯದರ್ಶಿ ಈ ಸಂಬಂಧ ಆದೇಶ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರವು ಅಧಿಕೃತವಾಗಿ ತೆರವಾಗಿದೆ.
ಭಾರತೀಯ ಸಂವಿಧಾನದ ವಿಧಿ 191(1)(e) ಮತ್ತು ಜನಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 8ರ ಅಡಿಯಲ್ಲಿ ಈ ಅನರ್ಹತೆ ಆದೇಶವನ್ನು ಹೊರಡಿಸಲಾಗಿದೆ. ನಿಯಮಗಳ ಪ್ರಕಾರ, ಯಾವುದೇ ಜನಪ್ರತಿನಿಧಿಗೆ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಜೈಲು ಶಿಕ್ಷೆಯಾದಲ್ಲಿ ಅವರು ತಕ್ಷಣವೇ ಶಾಸಕ ಸ್ಥಾನಕ್ಕೆ ಅನರ್ಹರಾಗುತ್ತಾರೆ.
ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ 15ನೇ ಆರೋಪಿಯಾಗಿದ್ದರು. ಇವರೂ ಸೇರಿದಂತೆ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಏಪ್ರಿಲ್ 16 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಈ ಮಧ್ಯೆ ವಿನಯ್ ಕುಲಕರ್ಣಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಶಿಕ್ಷೆಗೆ ತಡೆಯಾಜ್ಞೆ ನೀಡಬೇಕು ಮತ್ತು ಜಾಮೀನು ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.