2026-04-23 10:59:04

Virat Kohli arrives in Bengaluru | ಬೆಂಗಳೂರಿಗೆ ಆಗಮಿಸಿದ ವಿರಾಟ್ ಕೊಹ್ಲಿ | Speed News Kannada

Virat Kohli arrives in Bengaluru | ಬೆಂಗಳೂರಿಗೆ ಆಗಮಿಸಿದ ವಿರಾಟ್ ಕೊಹ್ಲಿ | Speed News Kannada

ಬೆಂಗಳೂರು, ಮಾ. 18- ಹತ್ತೊಂಬತ್ತನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ನಿಮಿತ್ತ ಆರ್‌ಸಿಬಿಯ ಸ್ಟಾ‌ರ್ ಆಟಗಾರ ವಿರಾಟ್ ಕೊಹ್ಲಿ ಅವರು ಇಂದು ನಗರಕ್ಕೆ ಆಗಮಿಸಿದ್ದಾರೆ. ದೇವನಹಳ್ಳಿಯ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕಿಂಗ್ ಕೊಹ್ಲಿಗೆ ವಿಮಾನ ನಿಲ್ದಾಣದ ಸಿಬ್ಬಂದಿಗಳು ಬಿಗಿ ಭದ್ರತೆ ಒದಗಿಸಿದ್ದರು. 18ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲುವಲ್ಲಿ ವಿರಾಟ್ ಕೊಹ್ಲಿ (144.71 ಸೆಟ್ರಕ್‌ರೇಟ್‌ನಲ್ಲಿ 8 ಅರ್ಧಶತಕಗಳೊಂದಿಗೆ 657ರನ್) ಮಹತ್ತರ ಪಾತ್ರ ವಹಿಸಿದ್ದರು. 19ನೇ ಆವೃತ್ತಿಯಲ್ಲಿ ಆರ್‌ಸಿಬಿ ಚಾಂಪಿಯನ್ ಪಟ್ಟ ತಮ್ಮಲ್ಲೇ ಉಳಿಸಿಕೊಳ್ಳಲು ವಿರಾಟ್ ಕೊಹ್ಲಿ ಪ್ರದರ್ಶನ ನಿರ್ಣಾಯಕವಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.