2026-05-17 09:53:16

Virat Kohli breaks silence on Test retirement | ಗೌರವ ಇಲ್ಲದ ಜಾಗದಲ್ಲಿ ಇರಲ್ಲ ಟೆಸ್ಟ್ ನಿವೃತ್ತಿ ಬಗ್ಗೆ ಮೌನ ಮುರಿದ ವಿರಾಟ್ ಕೊಹ್ಲಿ | Speed News Kannada

Virat Kohli breaks silence on Test retirement | ಗೌರವ ಇಲ್ಲದ ಜಾಗದಲ್ಲಿ ಇರಲ್ಲ ಟೆಸ್ಟ್ ನಿವೃತ್ತಿ ಬಗ್ಗೆ ಮೌನ ಮುರಿದ ವಿರಾಟ್ ಕೊಹ್ಲಿ | Speed News Kannada

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೋಹ್ಲಿ ತಮ್ಮ ಟೆಸ್ಟ್ ಕ್ರಿಕೆಟ್ ನಿವೃತ್ತಿಯ ಹಿಂದಿನ ಕಾರಣಗಳ ಬಗ್ಗೆ ಮೊದಲ ಬಾರಿಗೆ ಮುಕ್ತವಾಗಿ ಮಾತನಾಡಿದ್ದಾರೆ. ಆರ್‌ಸಿಬಿ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಕೊಹ್ಲಿ, ತಂಡದ ಒಳಗಿನ ವಾತಾವರಣ ಮತ್ತು ನಂಬಿಕೆಯ ಕೊರತೆಯೇ ತಮ್ಮ ನಿರ್ಧಾರಕ್ಕೆ ಕಾರಣ ಎಂದು ಪರೋಕ್ಷವಾಗಿ ಸೂಚಿಸಿದರು. 2024-25ರ ಬಾರ್ಡರ್-ಗವಾಸ್ಕರ್ ಟ್ರೋಫಿ ಬಳಿಕ ಟೆಸ್ಟ್ ಕ್ರಿಕೆಟ್‌ ಗೆ ವಿದಾಯ ಹೇಳಿದ್ದ ಕೊಹ್ಲಿ, "ನನ್ನ ಮೇಲೆ ನಂಬಿಕೆ ಇಲ್ಲದ ವಾತಾವರಣದಲ್ಲಿ ಮುಂದುವರಿಯಲು ಸಾಧ್ಯವಾಗಲಿಲ್ಲ. ಪ್ರತಿಸಾರಿ ನನ್ನ ಮೌಲ್ಯವನ್ನು ಸಾಬೀತುಪಡಿಸಬೇಕಾದ ಪರಿಸ್ಥಿತಿ ಬಂದರೆ, ಅಂಥ ಜಾಗದಲ್ಲಿ ಇರಲು ನಾನು ಇಷ್ಟಪಡುವುದಿಲ್ಲ" ಎಂದು ಹೇಳಿದ್ದಾರೆ.
"ಟೆಸ್ಟ್ ಕ್ರಿಕೆಟ್ ಬಿಡುವುದು ಸುಲಭವಾಗಿರಲಿಲ್ಲ. ಆದರೆ ಆ ಸಮಯದಲ್ಲಿ ಆ ನಿರ್ಧಾರವೇ ಸರಿಯಾಗಿತ್ತು. ಎಲ್ಲಕ್ಕಿಂತ ಸ್ವಾಭಿಮಾನ ಮುಖ್ಯ" ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ 2027ರ ಏಕದಿನ ವಿಶ್ವಕಪ್‌ನಲ್ಲಿ ಆಡಲಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಕೊಹ್ಲಿ, "ನಾನು ಯಾರಿಗೂ ನನ್ನ ಸಾಮರ್ಥ್ಯವನ್ನು ಮತ್ತೆ ಮತ್ತೆ ಸಾಬೀತುಪಡಿಸುವ ಹಂತದಲ್ಲಿಲ್ಲ" ಎಂದಿದ್ದಾರೆ. "ತಂಡದ ಮ್ಯಾನೇಜ್‌ಮೆಂಟ್ ನನ್ನನ್ನು ಸಂಪೂರ್ಣವಾಗಿ ಗೌರವಿಸುತ್ತದೆ ಮತ್ತು ನನ್ನ ಅಗತ್ಯ ಇದೆ ಎಂದು ಭಾವಿಸಿದರೆ ಮಾತ್ರ 2027ರ ವಿಶ್ವಕಪ್ ಬಗ್ಗೆ ಯೋಚಿಸುತ್ತೇನೆ" ಎಂದು ಹೇಳಿದ್ದಾರೆ. ಪ್ರಸ್ತುತ ಐಪಿಎಲ್‌ ನಲ್ಲಿ ಉತ್ತಮ ಫಾರ್ಮ್ನಲ್ಲಿರುವ ಕೊಹ್ಲಿ, ಬ್ಯಾಟಿಂಗ್ ಮೂಲಕವೇ ಟೀಕೆಗಳಿಗೆ - ಉತ್ತರ ನೀಡುತ್ತಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.