2026-03-07 08:58:59

Wangchuk | ವಾಂಗ್‌ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ಫೆ 9 ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌ | Speed News Kannada

Wangchuk | ವಾಂಗ್‌ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ಫೆ 9 ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌ | Speed News Kannada

ನವದೆಹಲಿ: ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ ಚುಕ್ ಅವರನ್ನು ರಾಷ್ಟೀಯ ಭದ್ರತಾ ಕಾಯ್ದೆ (ಎನ್ ಎಸ್ ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ವಾಂಗ್‌ಚುಕ್ ಅವರ ಪತ್ನಿ ಗೀತಾಂಜಲಿ ಜೆ.ಆಂಗ್ಮೋ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಫೆಬ್ರವರಿ 9 ಕ್ಕೆ ಮುಂದೂಡಿದೆ.

ವಾಂಗ್‌ಚುಕ್ ಅವರ ಆರೋಗ್ಯ ತೀವ್ರ ಹದಗೆಟ್ಟಿದೆ, ಬಂಧನದ ಕ್ರಮವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ನ್ಯಾಯಪೀಠವು ಸರ್ಕಾರಕ್ಕೆ ಬುಧವಾರ ಸೂಚಿಸಿತ್ತು, ನಂತರ ಇಂದು ವಿಚಾರಣೆ ಮುಂದುವರೆಯಿತು.ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಪಿ.ಬಿ. ವರಾಳೆ ಅವರ ಪೀಠವು  ವಿಚಾರಣೆಯನ್ನು ಫೆ 9 ಕ್ಕೆ ಮುಂದೂಡಿತು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.