2026-06-08 02:42:58

War continues more than 500 Iranian civilians killed | ಮುಂದುವರೆದ ಯುದ್ಧ ಇರಾನ್‌ ನ 500ಕ್ಕೂ ಹೆಚ್ಚು ನಾಗರೀಕರ ಸಾವು | Speed News Kannada

War continues more than 500 Iranian civilians killed | ಮುಂದುವರೆದ ಯುದ್ಧ ಇರಾನ್‌ ನ 500ಕ್ಕೂ ಹೆಚ್ಚು ನಾಗರೀಕರ ಸಾವು | Speed News Kannada

ನವದೆಹಲಿ:  ಅಮೆರಿಕ ಹಾಗೂ ಇಸ್ರೇಲ್ ಸೇನೆಗಳು ಇರಾನ್‌ ಮೇಲೆ ನಡೆಸಿದ ದಾಳಿಯಿಂದ 555 ಮಂದಿ ನಾಗರೀಕರು ಮೃತಪಟ್ಟಿದ್ದಾರೆ ಎಂದು ಇರಾನಿಯನ್‌ ರೆ ಕ್ರೆಸೆಂಟ್‌ ಸೊಸೈಟಿ ತಿಳಿಸಿದೆ. ಸೋಮವಾರ ಒಂದೇ ದಿನ 35 ಮಂದಿ ನಾಗರೀಕರು ಅಸುನೀಗಿದ್ದಾರೆ ಮತ್ತು ದೇಶದ 131 ನಗರಗಳು ದಾಳಿಗೆ ಗುರಿಯಾಗಿವೆ
ಅಮೆರಿಕ ಹಾಗೂ ಇಸ್ರೇಲ್ ಸೇನೆಗಳು ಇರಾನ್ ಮೇಲಿನ ಸೇನಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಬಾಂಬ್ ಹಾಗೂ ಕ್ಷಿಪಣಿ ದಾಳಿ ನಡೆಸಿವೆ. ಇರಾನ್ ಕೂಡಾ ಪ್ರತಿ ದಾಳಿ ನಡೆಸುತ್ತಿದ್ದು, ಪಶ್ಚಿಮ ಏಷ್ಯಾದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ.
ಅಮೆರಿಕ ಹಾಗೂ ಇಸ್ರೇಲ್ ಸೇನೆಗಳು ಇರಾನ್‌ ಕ್ಷಿಪಣಿ ವ್ಯವಸ್ಥೆಗಳ ಮೇಲೆ ಭಾರಿ ಪ್ರಮಾಣದಲ್ಲಿ ಬಾಂಬ್ ದಾಳಿ ನಡೆಸುತ್ತಿದ್ದು, ರಾಜಧಾನಿ ಟೆಹರಾನ್ ನಲ್ಲಿರುವ ಇರಾನ್‌ನ ಪ್ರಮುಖ ಸೇನಾ ನೆಲೆಗಳು, ಸರ್ಕಾರಿ ಕಟ್ಟಡಗಳು ಮತ್ತು ಗುಪ್ತಚರ ಸಂಸ್ಥೆಯ ಕೇಂದ್ರಗಳನ್ನು ಗುರಿಯಾಗಿಸಿಕೊಂಡಿವೆ.
ಇರಾನ್‌ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕೋರ್ (ಐಆರ್‌ಜಿಸಿ) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನಿವಾಸ ಸೇರಿದಂತೆ ಟೆಲ್ ಅವೀವ್, ಹೈಫಾ ಮತ್ತು ಪೂರ್ವ ಜೆರುಸಲೇಂನ ಹಲವು ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿಸಿದೆ. ಈ ಮಧ್ಯೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ನಮ್ಮ ಸೈನಿಕರ ಸಾವಿಗೆ ಸೇಡು ತೀರಿಸಿಕೊಳ್ಳದೆ ಬಿಡುವುದಿಲ್ಲ ಎಂದು ಗುಡುಗಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.