2026-06-08 04:09:26

War of words between DCM D.K. Shivakumar and MLA Munirathna in the House | ಸದನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್- ಶಾಸಕ ಮುನಿರತ್ನ ನಡುವೆ ಮಾತಿನ ಕದನ | Speed news kannada

War of words between DCM D.K. Shivakumar and MLA Munirathna in the House | ಸದನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್- ಶಾಸಕ ಮುನಿರತ್ನ ನಡುವೆ ಮಾತಿನ ಕದನ | Speed news kannada

ಕರ್ನಾಟಕ ವಿಧಾನಸಭೆಯ ಬಜೆಟ್‌ ಅಧಿವೇಶನದಲ್ಲಿ ಬಿಜೆಪಿ ಶಾಸಕ ಮುನಿರತ್ನ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಬೆಂಗಳೂರಿಗೆ ಸಂಬಂಧಿಸಿದ ಕಸ ವಿಚಾರದ ಬಗ್ಗೆ ಮಾತನಾಡುತ್ತಿರುವಾಗ ಈ ವಿಷಯಗಳ ಬಗ್ಗೆ ಚರ್ಚೆ ವೇಳೆ ವೈಯಕ್ತಿಕ ಆರೋಪ ಮತ್ತು ಪ್ರತ್ಯಾರೋಪಗಳು ಕೇಳಿಬಂದಿವೆ . ಮುನಿರತ್ನ ಕೇಸ್‌ಗಳ ಬಗ್ಗೆ ಮಾತಾಡೋದು ಬೇಕಾದಷ್ಟಿದೆ. ಅದರ ಬಗ್ಗೆ ಚರ್ಚೆ ಮಾಡಬೇಕು ಅಂದರೆ ಮಾಡ್ತೀನಿ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಈ ವೇಳೆ ಬಿಜೆಪಿ ಶಾಸಕ ಮುನಿರತ್ನ ಹಾಗೂ ಡಿ.ಕೆ.ಶಿವಕುಮಾರ್‌ ನಡುವೇ ತೀರಾ ವಾಗ್ವಾದ ನಡೆದಿದ್ದು ಡಿ.ಕೆ.ಶಿವಕುಮಾರ್‌ ನಿನ್ನಂತ ಪುಡಿಗಳಿಗೆ ನಾನು ಹೆದರಲ್ಲ ಎಂದು ಮುನಿರತ್ನಗೆ ತೀರುಗೇಟು ನೀಡಿದ್ದಾರೆ. ಈ ಎಲ್ಲಾ ವಿಷಯಗಳು ಸದನದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.