2026-06-08 04:55:15

ನುಡಿದಂತೆ ನಡೆದಿದ್ದೇವೆ, ಅದಕ್ಕೆ ಸಾಧನಾ ಸಮಾವೇಶ ಮಾಡುತ್ತಿದ್ದೇವೆ: ಡಾ. ಶರಣಪ್ರಕಾಶ ಪಾಟೀಲ್‌|Speed News Kannada

 ನುಡಿದಂತೆ ನಡೆದಿದ್ದೇವೆ, ಅದಕ್ಕೆ ಸಾಧನಾ ಸಮಾವೇಶ ಮಾಡುತ್ತಿದ್ದೇವೆ: ಡಾ. ಶರಣಪ್ರಕಾಶ ಪಾಟೀಲ್‌|Speed News Kannada

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೂರು ವರ್ಷದಲ್ಲಿ ನುಡಿದಂತೆ ನಡೆದಿದೆ. ಅದ್ಕಕಾಗಿಯೇ ತುಮಕೂರಿನಲ್ಲಿ ಸಾಧನಾ ಸಮಾವೇಶ ಮಾಡುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಾಧನೆಗಳನ್ನು ಜನರಿಗೆ ತಿಳಿಸುವುದಕ್ಕಾಗಿ ಸಾಧನಾ ಸಮಾವೇಶ ಆಯೋಜಿಸಲಾಗಿದೆ. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ನಂತರವೂ ಆರ್ಥಿಕ ಸ್ಥಿತಿ ಉತ್ತಮವಾಗಿದೆ. ಚುನಾವಣೆಗೆ ಮುನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಬಹುತೇಕ ಈಡೇರಿಸಲಾಗಿದೆ. ನಮ್ಮ ಸರ್ಕಾರ ಸಮರ್ಥ ಆಡಳಿತ ನೀಡಿದೆ. ಕಾಂಗ್ರೆಸ್‌ ಎಂದರೆ ನುಡಿದಂತೆ ನಡೆಯುವ ಪಕ್ಷ ಎಂಬುದು ಸಾಬೀತಾಗಿದೆ. ಹಾಗಾಗಿ ಪ್ರತಿಪಕ್ಷಗಳು ಈ ಬಗ್ಗೆ ಯಾವುದೇ ಟೀಕೆಗಳನ್ನು ಮಾಡುವ ಅವಶ್ಯಕತೆ ಇಲ್ಲ ಎಂದು ತಿರುಗೇಟು ತಿಳಿಸಿದರು.

ತುಮಕೂರು ಸಾಧನಾ ಸಮಾವೇಶದ ಬಳಿಕ ಕೆಲವು ಬದಲಾವಣೆ ಆಗಲಿದೆ ಎಂಬ ಚರ್ಚೆ ನಡೆಯುತ್ತಿದೆ. ಇದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಮೂರು ವರ್ಷದ ನಂತರ ಸಚಿವ ಸಂಪುಟದಲ್ಲಿ ಬದಲಾವಣೆ ಆಗುವುದು ಸಹಜ. ನಮ್ಮ ಹೈಕಮಾಂಡ್‌ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತದೆ. ಯಾವ ಗೊಂದಲವೂ  ಇಲ್ಲ. ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಅದನ್ನು ವರಿಷ್ಠರು ಬಗೆಹರಿಸುತ್ತಾರೆ ಎಂದು ಡಾ. ಶರಣಪ್ರಕಾಶ ಪಾಟೀಲ್‌ ಸ್ಪಷ್ಟಪಡಿಸಿದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.