ವೆಡ್ಡಿಂಗ್ ಆನಿವರ್ಸರಿ: ಜೈಲಿನಲ್ಲಿ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ|Speed News Kannada
49
2026-05-19 17:59:27
ವೆಡ್ಡಿಂಗ್ ಆನಿವರ್ಸರಿ: ಜೈಲಿನಲ್ಲಿ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ|Speed News Kannada
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಚಿತ್ರನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ದಂಪತಿಗೆ ಇಂದು (ಮೇ 19) 23ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಆದರೆ ಆಚರಿಸಿಕೊಳ್ಳುವ ಉಮೇದಿನಲ್ಲಿ ಇಬ್ಬರೂ ಇಲ್ಲ. ಆದರೂ ವೆಡ್ಡಿಂಗ್ ಆನಿವರ್ಸರಿ ಅಂಗವಾಗಿ ದರ್ಶನ್ ಭೇಟಿಯಾಗಲು ವಿಜಯಲಕ್ಷ್ಮಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಆಗಮಿಸಿದ್ದರು. ಇಂದು ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ವಿಜಯಲಕ್ಷ್ಮಿ ಅವರು ತಮ್ಮ ಪುತ್ರ ವಿನೀಶ್ ಜತೆ ಆಗಮಿಸಿ ದರ್ಶನ್ ಭೇಟಿಯಾದರು.
ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ವಿಜಯಲಕ್ಷ್ಮಿ ಅವರು ಎಕ್ಸ್ ನಲ್ಲಿ ದರ್ಶನ್ ಅವರನ್ನು ನೆನೆದು ಭಾವುಕ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ತಮ್ಮ ವಿವಾಹ ವಾರ್ಷಿಕೋತ್ಸವದಂದು ದರ್ಶನ್ ಅವರನ್ನು ಭೇಟಿ ಮಾಡಲು ಅವಕಾಶ ನೀಡುವಂತೆ ವಿಜಯಲಕ್ಷ್ಮಿ ಅವರು ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು.
"ಜೈಲು ನಿಯಮಗಳ ಪ್ರಕಾರ ನಿರ್ಧಾರ ತೆಗೆದುಕೊಳ್ಳಲಾಗುವುದು" ಎಂದು ಅಲೋಕ್ ಕುಮಾರ್ ತಿಳಿಸಿದ್ದರು. ಸದ್ಯ ದರ್ಶನ್ ಅವರ ಜಾಮೀನು ಅರ್ಜಿಯು ಸುಪ್ರೀಂ ಕೋರ್ಟ್‌ನಲ್ಲಿ ತಿರಸ್ಕಾರಗೊಂಡಿದ್ದು, 2027ರ ಮೇ 15ರ ವರೆಗೆ ಜೈಲಿನಲ್ಲೇ ಇರಬೇಕಿದೆ.
ಈ ಮಧ್ಯೆ ದರ್ಶನ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವದಂತಿಗಳು ಹರಿದಾಡಿದ್ದವು. ಆ ಬಗ್ಗೆ ಸ್ಪಷ್ಟನೆ ನೀಡಿರುವ ಅಲೋಕ್ ಕುಮಾರ್, "ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ದರ್ಶನ್ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎನ್ನುವುದು ಕೇವಲ ವದಂತಿ. ಯಾರೂ ಆತಂಕ ಪಡಬೇಕಿಲ್ಲ. ಇಂತಹ ಗಾಳಿಸುದ್ದಿಗಳನ್ನು ನಂಬಬೇಡಿ. ದರ್ಶನ್ ಅವರು ಚೆನ್ನಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು
ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.