2026-06-08 03:25:10

west bengal clashes between tmc-bjp workers, two died| ಪಶ್ಚಿಮ ಬಂಗಾಳ: ಬಿಜೆಪಿ ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ; ಇಬ್ಬರ ಸಾವು| Speed News Kannada

west bengal clashes between tmc-bjp workers, two died| ಪಶ್ಚಿಮ ಬಂಗಾಳ: ಬಿಜೆಪಿ ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ; ಇಬ್ಬರ ಸಾವು| Speed News Kannada

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿದ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿದೆ. ಆಡಳಿತಾರೂಢ ಬಿಜೆಪಿ ಮತ್ತು ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ರಾಜ್ಯದ ಹಲವೆಡೆ ಘರ್ಷಣೆಗಳು ನಡೆದಿವೆ. ಗೆಲುವಿನ ಸಂಭ್ರಮಾಚರಣೆ ಮತ್ತು ಸೋಲಿನ ಹತಾಶೆಯ ನಡುವೆ ಆರಂಭವಾದ ಈ ಸಂಘರ್ಷವು ಈಗ ಹಿಂಸಾಚಾರಕ್ಕೆ ತಿರುಗಿದ್ದು, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಘರ್ಷಣೆಯಲ್ಲಿ ಬಿಜೆಪಿ ಮತ್ತು ಟಿಎಂಸಿಯ ತಲಾ ಒಬ್ಬರು ಕಾರ್ಯಕರ್ತರು ಮೃತಪಟ್ಟಿದ್ದಾರೆ.

ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಟಿಎಂಸಿ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಕಚೇರಿಗಳ ಕಿಟಕಿ ಬಾಗಿಲುಗಳನ್ನು ಮುರಿದು ಸಂಭರಮಾಚರಣೆ ಮಾಡುತ್ತಿದ್ದಾರೆ. ಅಲ್ಲಲ್ಲಿ ಟಿಎಂಸಿ ಕಾರ್ಯಕರ್ತರ ಮೇಲೂ ಹಲ್ಲೆ ನಡೆಸಿದ ಪ್ರಕರಣಗಲೂ ವರದಿಯಾಗಿವೆ.

ಕೋಲ್ಕತ್ತಾದ ಕೆಲ ಬಾಗಗಳಲ್ಲಿ ಮಾರಾಮಾರಿ ನಡೆದಿರುವ ವರದಿಯಾಗಿದೆ. ಘರ್ಷಣೆಯಲ್ಲಿ ಭಾಗಿಯಾದವರ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ಕಡೆ ಲಾಠಿ ಚಾರ್ಜ್‌ ಮಾಡಲಾಗಿದೆ.

ಬಿಜೆಪಿ 206 ಸ್ಥಾನಗಳನ್ನು ಗೆದ್ದು ಅಭೂತಪೂರ್ವ ಜಯ ಸಾಧಿಸಿದ್ದರೆ, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 80 ಸ್ಥಾನಗಳಿಗೆ ಕುಸಿದಿದೆ

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.